

ಬೆಂಗಳೂರು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಪ್ರೌಢ ಶಾಲಾ ಸಹ ಶಿಕ್ಷಕರನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕ ಹುದ್ದೆಗೆ ಬಡ್ತಿ ನೀಡುವ ಸಂಬಂಧ ಅರ್ಹರ ಜ್ಯೇಷ್ಠತಾ ಪಟ್ಟಿ ತಯಾರಿಸಿ ಡಿ.31ರೊಳಗೆ ಸರ್ಕಾರಕ್ಕೆ ಸಲ್ಲಿಸುವಂತೆ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
ಕರ್ನಾಟಕ ಸರ್ಕಾರಿ ನೌಕರರ (ಜ್ಯೇಷ್ಠತೆ) ನಿಯಮಗಳು-1957ರ ನಿಯಮ 7-ಎ ಅಡಿ ರಾಜ್ಯಮಟ್ಟದ ಒಂದೇ ಪಟ್ಟಿಯನ್ನು ಸಿದ್ಧಪಡಿಸುವಂತೆ ಪ್ರೌಢ ಶಿಕ್ಷಣ ನಿರ್ದೇಶಕರು ಸೂಚನೆ ನೀಡಿದ್ದಾರೆ.
ಡಿ.3ರಂದು ನಡೆದ ಸಭೆಯ ನಡವಳಿಯಂತೆ ಪ್ರೌಢಶಾಲಾ ಸಹ ಶಿಕ್ಷಕರ ಪಟ್ಟಿಯನ್ನು ವಿಭಾಗೀಯ ಸಹ ನಿರ್ದೇಶಕರು ಸಿದ್ಧಪಡಿಸಿ ಸಲ್ಲಿಸಬೇಕಿದೆ. ಶಿಕ್ಷಕರ ಜನ್ಮ ದಿನಾಂಕ, ಸೇವೆಗೆ ಸೇರಿದ ವೇಳೆ ಇದ್ದ ಕೇಡರ್, ಪ್ರಸ್ತುತ ಇರುವ ಕೇಡರ್ ಸೇರಿ ಇನ್ನಿತರ ಮಾಹಿತಿಯನ್ನು ಅಪ್‌ಲೋಡ್ ಮಾಡುವಂತೆ ತಿಳೀಸಲಾಗಿದೆ.