ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ!; ಸಿಎಂ‌ ಮುಂದೆ ಅಳಲು

imresizer-1701064727266
Published on

ಬೆಂಗಳೂರು: ಮನೆ ಕಂದಾಯ ಕಟ್ಟಿದ್ದರೂ ದುಪ್ಪಟ್ಟು ಪೆನಾಲ್ಟಿ ಹಾಕಿದ್ದಾರೆ. ಕಂದಾಯ ಕಟ್ಟಿದ ರಶೀದಿ ಇಟ್ಟುಕೊಂಡು ಬಿಬಿಎಂಪಿಗೆಗ ಹೋದರೆ ನಮಗೆ ಗೊತ್ತಿಲ್ಲ ಹೋಗಿ ಸರ್ಕಾರಕ್ಕೆ ಕೇಳಿ ಎಂದು ಸಿಬ್ಬಂದಿ ದರ್ಪದಿಂದ ನಡೆದುಕೊಳ್ಳುತ್ತಾರೆ ಎಂದು ವೃದ್ದೆಯೊಬ್ಬರು ಸಿಎಂಗೆ ದೂರಿದ್ದಾರೆ.

ಜನ ಸ್ಪಂದನದಲ್ಲಿ ದೂರು ಆಲಿಸಿದ ಸಿಎಂ, ಅಧಿಕಾರಿಗಳ ವಿರುದ್ಧ ಗರಂ ಆದರು. ಬಿಬಿಎಂಪಿ ಅಧಿಕಾರಿಯನ್ನು ಕರೆದು ಪ್ರಕರಣವನ್ನು ಖುದ್ದಾಗಿ ಗಮನಿಸಿ ಸಂಜೆಯೊಳಗೆ ಪರಿಹಾರ ಒದಗಿಸಿ ನನಗೆ ರಿಪೋರ್ಟ್ ಮಾಡಿ ಎಂದು ಸೂಚಿಸಿದರು.

ಹಾಗೆಯೇ, ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳ ಹಿನ್ನೆಲೆಯಲ್ಲಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿ ತಾಂತ್ರಿಕ‌ ತೊಂದರೆ ಇದ್ದರೆ ತಕ್ಷಣ ಬಗೆಹರಿಸಿ ಸಿಬ್ಬಂದಿಯಿಂದ ತೊಂದರೆ ಆಗುತ್ತಿದ್ದರೆ ಅವರ ಮೇಲೆ ಕ್ರಮ ಜರುಗಿಸಿ ಎಂದು ಸಿಎಂ ತಾಕೀತು ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net