ರೈತರ ಹಿತ ಕಾಪಾಡಿರಿ; ಕೇಂದ್ರದ ಅಧಿಕಾರಿಗಳಿಗೆ ಸಿಎಂ ಸಲಹೆ

CM Siddaramaiah discuss with central drought study team
Published on

ಬೆಂಗಳೂರು: ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲೂಕುಗಳನ್ನು ಬರಪೀಡಿತವೆಂದು ೋಷಿಸಲಾಗಿದೆ. ಇನ್ನೂ 32 ತಾಲೂಕುಗಳು ನಿಗದಿತ ಮಾನದಂಡವನ್ನು ಪೂರೈಸುತ್ತಿವೆ. ರೈತಹಿತ ರಕ್ಷಿಸಿರಿ, ಪೂರಕ ಕ್ರಮಕೈಗೊಳ್ಳಿರಿ ಎಂದು ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಭೇಟಿಯಾದ ಕೇಂದ್ರದ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಮುಂಗಾರು ಮಳೆ ವಿಳಂಬ, ಕೊರತೆಯಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಶೇ.92ರಷ್ಟು ಬಿತ್ತನೆಯಾದ ಪ್ರದೇಶದಲ್ಲಿ 42 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ.

ಆಗಸ್ಟ್‌ನಲ್ಲಿ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿದೆ. ಇದರಿಂದಾಗಿ ಅಣೆಕಟ್ಟೆಗಳು ಬರಿದಾಗಿವೆ, ಮುಂಗಾರು ಮುಗಿಯುತ್ತಾ ಬಂದಿದೆ. ಕುಡಿಯುವ ನೀರು, ವಿದ್ಯುತ್ ಕೊರತೆ ಆತಂಕ ಸೃಷ್ಟಿಸಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಬೆಳೆ ನಷ್ಟ ಪರಿಹಾರ ಏರಿಸಬೇಕು

ಬರ ೋಷಣೆಗೆ ನಿಗದಿತ ಮಾರ್ಗಸೂಚಿ ಪರಿಷ್ಕರಣೆ ಮಾತ್ರವಲ್ಲ, ಬೆಳೆ ನಷ್ಟಕ್ಕೆ ನೀಡುವ ಪರಿಹಾರ ಮೊತ್ತವನ್ನೂ ಏರಿಸಬೇಕು. ಎನ್‌ಡಿಆರ್‌ಎ್ ನಿಯಮಾವಳಿಗಿಂತ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರವನ್ನು ರಾಜ್ಯದಲ್ಲಿ ನೀಡಲಾಗುತ್ತಿದೆ ಎಂದು ಕೇಂದ್ರದ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net