ಸರ್ಕಾರಿ ಆಸ್ತಿಗಳ ರಕ್ಷಣೆಗೆ ಒತ್ತಾಯ

19-klr-4
Published on

ಕೋಲಾರ: ಜಿಲ್ಲೆಯಲ್ಲಿ ಸರ್ಕಾರಿ ಆಸ್ತಿಗಳಾದ ಕೆರೆ, ರಾಜಕಾಲುವೆ, ಗುಂಡು ತೋಪು, ಸ್ಮಶಾನ ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸೇನೆ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ನಗರದ ಬಂಗಾರಪೇಟೆ ವೃತ್ತದಲ್ಲಿ ಜಮಾಯಿಸಿದ ಸೇನೆಯ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆಗೆ ಮಲಾರ್ಪಣೆ ಮಾಡಿ ಜಿಲ್ಲಾಡಳಿತದ ಭನವದವರಗೆ ರ‌್ಯಾಲಿ ನಡೆಸಿದರಲ್ಲದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸೇನೆಯ ಅಧ್ಯಕ್ಷ ಎಂ.ಆರ್.ನಾರಯಣಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಜನರ ಕೆಲಸಗಳು ಆಗುತ್ತಿಲ್ಲ. ಸರ್ಕಾರಿ ಜಮೀನುಗಳು ಭೂಗಳ್ಳರ ಪಾಲುಗತ್ತಿದೆ, ಕಂದಾಯ ಇಲಾಖೆ ಅಧಿಕಾರಿಗಳೇ ಸರ್ಕಾರಿ ಜಮೀನುಗಳಿಗೆ ಸಂಬಂಧಿಸಿದ ನಕಲಿ ದಾಖಲೆ ಸೃಷ್ಟಿಸಿಕೊಡುತ್ತಿದ್ದಾರೆ ಎಂದು ದೂರಿದರು.

ಕರೊನಾ ಹೆಸರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರು ಜನರನ್ನು ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರದ ವಿರುದ್ಧ ಹೋರಾಟ ನಡೆಸುವ ಸಂಘಟನೆಗಳ ಮೇಲೆ ದೂರು ದಾಖಲಿಸುವ ಕೆಲಸ ಕೈಬಿಡದಿದ್ದಲ್ಲಿ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ, ಸಾಮಾಜಿಕ ಭದ್ರತೆಯಡಿಯಲ್ಲಿ ನೀಡಲಾಗುತ್ತಿರುವ ವೃದ್ಧಾಪ್ಯ ವೇತನ, ವಿಧುವಾ ವೇತನ, ಅಂಗವಿಲಕರ ಮಾಶಾಸನನ, ಸಂದ್ಯಾ ಸುರಕ್ಷಾದಂತಹ ಯೋಜನೆಯಲ್ಲಿ ಬರುವ ಫಲಾನುಭಿಗಳಿಗೆ 3 ತಿಂಗಳಿಗೊಮ್ಮೆಹಾಗೂ 6 ತಿಂಗಳಿಗೊಮ್ಮೆ ದಾಖಲೆ ಸರಿಯಿಲ್ಲ ಎಂಬ ಕುಂಟುನೆಪವೊಡ್ಡಿ ವೇತನ ನೀಡುತ್ತಿಲ್ಲ, ಈ ವ್ಯವಸ್ಥೆ ಸರಿಪಡಿಸಬೇಕು ಎಂದು ಆಗ್ರಹಿಸಿ ಎಡಿಸಿ ಡಾ. ವಿ.ಸಿ.ಸ್ನೇಹಾ ಅವರಿಗೆ ಮನವಿ ಸಲ್ಲಿಸಿದರು.

ಕಾರ್ಯಾಧ್ಯಕ್ಷ ಸಿ.ವಿ.ಪ್ರಭಾಕರ್ ಗೌಡ, ಗೌರವಾಧ್ಯಕ್ಷ ಕೆ.ಬಿ.ಮುನಿವೆಂಕಟಪ್ಪ, ಉಪಾಧ್ಯಕ್ಷ ಎಂ.ವಿ.ಶ್ರೀಧರ್, ಸಂಘಟನಾ ಕಾರ್ಯದರ್ಶಿಗಳಾದ ವೆಂಕಟಾಚಲಪತಿ, ಮಂಜುನಾಥ್, ಬಂಗಾರಪೇಟೆ ಅಧ್ಯಕ್ಷ ತೊರಗನದೊಡ್ಡಿ ಮಂಜುನಾಥ್, ಪದಾಧಿಕಾರಿಗಳಾದ ಇಜಾರ್ ಪಾಷಾ, ಮಕ್ಸೂದ್ ಪಾಷಾ, ಆನಂದಗೌಡ, ನಾರಾಯಣಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net