ಕೇಂದ್ರ ಬಜೆಟ್ ವಿರುದ್ಧ ಆಕ್ರೋಶ: ನಗರದಲ್ಲಿ ದಸಂಸ ಕಾರ್ಯಕರ್ತರ ಪ್ರತಿಭಟನೆ

Protest against central government budget mandya
Published on

ಮಂಡ್ಯ: ಕೇಂದ್ರ ಸರ್ಕಾರ ಮಂಡಿಸಿದ ಮಧ್ಯಂತರ ಬಜೆಟ್ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆಯ ವಿರೋಧಿಯಾಗಿದೆ ಎಂದು ಆರೋಪಿಸಿ ಗುರುವಾರ ನಗರದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟ ಕಾರ್ಯಕರ್ತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್‌ಗೆ ಮನವಿ ಸಲ್ಲಿಸಿದರು. ದಲಿತ, ಶೋಷಿತ ತಳ ಸಮುದಾಯಗಳ ಅಭ್ಯುದಯ, ಸಾಮಾಜಿಕ,ಆರ್ಥಿಕ ನ್ಯಾಯಕ್ಕೆ ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಸ್ಪಂದಿಸಬೇಕಾಗಿತ್ತು. ಆದರೆ ಮಾನವೀಯ, ಸಾಂವಿಧಾನಿಕ ಆಶಯಕ್ಕೆ ಆದ್ಯತೆ ನೀಡದ ಬಜೆಟ್ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮತೆಯ ವಿರುದ್ಧವಾಗಿದೆ ಎಂದು ಖಂಡಿಸಿದರು.

ಕೇಂದ್ರ ಯೋಜನಾ ಆಯೋಗದ ನಿರ್ದೇಶನದಂತೆ ರಾಷ್ಟ್ರೀಯ ಎಸ್ಸಿ/ಎಸ್ಟಿ ಉಪ ಯೋಜನಾ ಕಾಯ್ದೆ ರೂಪಿಸಬೇಕಿತ್ತು. ಬಜೆಟ್‌ನಲ್ಲಿ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಶೇ.30ರಷ್ಟು ಅನುದಾನ ಮೀಸಲಿರಿಸುವ ಕಾಯ್ದೆಯನ್ನು ಜಾರಿಗೊಳಿಸಬೇಕಿತ್ತು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾಧ್ಯಕ್ಷ ಕೆ.ಎಂ.ಶ್ರೀನಿವಾಸ್, ಎಸ್.ಕುಮಾರ್, ಸಿದ್ದಯ್ಯ ಮಳವಳ್ಳಿ, ಸೋಮಶೇಖರ್, ವೈ.ಸುರೇಶ್ ಕುಮಾರ್, ಬಿ.ಆನಂದ, ಬಸವರಾಜ್, ಬಿ.ಎಂ.ಸೋಮಶೇಖರ್, ಗೀತಾ ಮೇಲುಕೋಟೆ, ಸುರೇಶ್ ಮರಳಗಾಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net