ರಮೇಶ್ ಕತ್ತಿ ವಿರುದ್ಧ ಪ್ರತಿಭಟನೆ

21-OCT-GPT-1
ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಎದುರು ಸಮಾವೇಶಗೊಂಡ ವಾಲ್ಮೀಕಿ ಸಮುದಾಯದ ಮುಖಂಡರು ರಮೇಶ್ ಕತ್ತಿ ಬಂಧಿಸುವಂತೆ ಮನವಿ ಸಲ್ಲಿಸಿದರು.
Published on

ಗುಂಡ್ಲುಪೇಟೆ: ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹಿಸಲಾಯಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿದ ಪ್ರತಿಭಟನಾಕಾರರು ರಮೇಶ್ ಕತ್ತಿ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ಹೊರಹಾಕಿದರು. ಸಮುದಾಯದ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿರುವ ಕತ್ತಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ ಮನವಿ ಪತ್ರವನ್ನು ಕಂದಾಯಾಧಿಕಾರಿಗೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net