ರಾಜ್ಯಪಾಲರ ಕ್ರಮ ಖಂಡಿಸಿ ಪ್ರತಿಭಟನೆ

2
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ನಗರದಲ್ಲಿ ಪ್ರತಿಭಟನೆ ಮುಂದುವರಿದಿದೆ. ಭಾನುವಾರ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಹಾಗೂ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ನೇತೃತ್ವದಲ್ಲಿ ಪ್ರತ್ಯೇಕ ಪ್ರತಿಭಟನೆಗಳು ನಡೆದವು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಭವನದ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರನ್ನು ರಾಜ್ಯಪಾಲರ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ರಾಜ್ಯಪಾಲರು ಕಾನೂನು ಪಾಲನೆ ಬಿಟ್ಟು ರಾಜಕಾರಣ ಮಾಡುತ್ತಿದ್ದಾರೆ. ಜೆಡಿಎಸ್, ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಷಡ್ಯಂತ್ರ ಮಾಡಿದ್ದಾರೆ. ಅದು ಫಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳು ಮತ್ತು ಭಾಗ್ಯಗಳ ರೂವಾರಿ ಮುಖ್ಯಮಂತ್ರಿ ಬಡವರ ಪರವಾಗಿ ರೂಪಿಸಿರುವ ಕಾರ್ಯಕ್ರಮಗಳನ್ನು ಸಹಿಸಲಾಗದೆ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net