ನಿವೃತ್ತಿಯಾದ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

Oplus_16908288
ಗ್ರಾಚುಟಿ ಹಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಂಜನಗೂಡು ತಾಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಪ್ರತಿಭಟನೆ ನಡೆಸಿದರು.
Published on

ನಂಜನಗೂಡು: 2011 ರಿಂದ 2023 ಮಾರ್ಚ್ ತನಕ ನಿವೃತ್ತಿಯಾದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸುಪ್ರೀಂ ಕೋರ್ಟ್ ಆದೇಶದಂತೆ ಗ್ರಾಚುಟಿ ಮೊತ್ತವನ್ನು ಕೊಡುವಂತೆ ಒತ್ತಾಯಿಸಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಗರದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

1975 ಅಕ್ಟೋಬರ್ 2ರಂದು ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಶಿಶುವಿನಂತೆ ಇತ್ತು. ಇಂದು ಈ ಯೋಜನೆ ಹೆಮ್ಮರವಾಗಿ ಬೆಳೆದು ರಾಜ್ಯದಲ್ಲಿ ಸುಮಾರು 50 ಲಕ್ಷ ಫಲಾನುಭವಿಗಳಿದ್ದಾರೆ. ಅಲ್ಲದೆ ಮಾನವ ಸಂಪನ್ಮೂಲಗಳ ಬೆಳವಣಿಗೆಯನ್ನು ಖಾತ್ರಿಪಡಿಸುವ ಯೋಜನೆಯೂ ಆಗಿದೆ. ಇಂತಹ ಯೋಜನೆಯು ಅಭಿವೃದ್ಧಿಗೆ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ದುಡಿದಿದ್ದಾರೆ. 2022ರಲ್ಲಿ ಸುಪ್ರೀಂ ಕೋರ್ಟ್, ಅಂಗನವಾಡಿ ಕೇಂದ್ರಗಳಲ್ಲಿ ಕೆಲಸ ಮಾಡುವ ನೌಕರರಿಗೆ 1972 ನಿಬಂಧನೆಗಳು ಅನ್ವಯವಾಗುತ್ತದೆ ಎಂದು ತೀರ್ಪು ನೀಡಿದೆ. ಈ ತೀರ್ಪನ್ನು ರಾಜ್ಯದಲ್ಲಿ ಜಾರಿ ಮಾಡಬೇಕು ಎಂದು ಚಳವಳಿ ನಡೆಸಿದ ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ 2023ರಲ್ಲಿ ಗ್ರಾಚುಟಿ ಜಾರಿ ಮಾಡಿದೆ. ಈ ಆದೇಶ 2011 ರಿಂದ 2023 ಮಾರ್ಚ್ ತನಕ ನಿವೃತ್ತಿಯಾದ 10,311 ಅಂಗನವಾಡಿ ಕಾರ್ಯಕರ್ತೆಯರು, 11,980 ಅಂಗನವಾಡಿ ಸಹಾಯಕಿಯರಿಗೆ ಅನ್ವಯಿಸಬೇಕು. ತಕ್ಷಣವೇ ಸರ್ಕಾರ ಅನುದಾನ ಬಿಡುಗಡೆಗೊಳಿಸಿ ನೌಕರರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಬಳಿಕ ಸಿಡಿಪಿಒ ಕೆ.ಎಂ.ಭವ್ಯಶ್ರೀ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೌಕರರಾದ ಲೀಲಾವತಿ, ಚಂದ್ರಿಕಾ, ಕಮಲಾಕ್ಷಿ, ಹೇಮಾವತಿ, ಶಶಿಕಲಾ ರಾಜಮನೆ, ಭಾಗ್ಯಾ, ಪುಷ್ಪಲತಾ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ನಿವೃತ್ತ ಸಹಾಯಕಿಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net