ಸಿಎಂ ಭೇಟಿಗೆ ಅವಕಾಶ ಕೋರಿ ಪ್ರತಿಭಟನೆ

farmars
ಸಿಎಂ ಭೇಟಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಡಾ.ಗಣಪತಿಯಪ್ಪ ರೈತ ಸಂಘಟನೆಯ ಸದಸ್ಯರು ಗುರುವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಸಿಎಂ ಅವರೊಂದಿಗೆ ಚರ್ಚಿಸಬೇಕು. ಹೀಗಾಗಿ ಮುಖ್ಯಮಂತ್ರಿ ಶಿವಮೊಗ್ಗಕ್ಕೆ ಆಗಮಿಸುವ ಸಂದರ್ಭದಲ್ಲಿ ಅವರ ಭೇಟಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಸಾಗರದ ಡಾ.ಗಣಪತಿಯಪ್ಪ ರೈತ ಸಂಘಟನೆಯ ಸದಸ್ಯರು ಗುರುವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಚಕ್ರಾ, ವಾರಾಹಿ, ಇನ್ನಿತರ ಮುಳುಗಡೆ ಸಂತ್ರಸ್ತರಿಗೆ ಭೂಹಕ್ಕು ನೀಡಬೇಕೆಂದು ಆಗ್ರಹಿಸಿ ಹಲವಾರು ಬಾರಿ ಜಿಲ್ಲಾಡಿತಕ್ಕೆ ಮನವಿ ನೀಡಿದ್ದೇವೆ. 1973ರಲ್ಲಿ ಈ ಬಗ್ಗೆ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿತ್ತು. ಅದು ಈಗ ರದ್ದಾಗಿದೆ. ಮುಳುಗಡೆ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಕೂಡಲೇ ಟಾಸ್ಕ್ ಫೋರ್ಸ್ ರಚನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ಸಂತ್ರಸ್ತರ ವಿವಿಧ ಬೇಡಿಕೆಗಳನ್ನು ಈಡೇರಸಬೇಕು ಪೂರೈಸಬೇಕು. ಇದರ ಬಗ್ಗೆ ಚರ್ಚಿಸಲು ಸಿಎಂ ಭೇಟಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು.
ಸಾಗರ ತಾಲೂಕಿನ ವಿವಿಧೆಡೆ ಸರಣಿ ಕಳ್ಳತನ ನಡೆಯುತ್ತಿವೆ. ನಿಧಿಗಾಗಿ ದೇವಾಲಯಗಳ ಧ್ವಂಸವಾಗುತ್ತಿದೆ. ಬೆಳ್ಳಂದೂರು ಗ್ರಾಮದಲ್ಲಿ ಹಲವಾರು ಬಾರಿ ನಿಧಿ ಶೋಧನೆ ಮಾಡಲಾಗಿದೆ. ಪೊಲೀಸರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಗ್ರಾಮಸ್ಥರು ಭಯದ ವಾತಾವರಣದಲ್ಲಿದ್ದಾರೆ. ಕೂಡಲೇ ಜಿಲ್ಲಾ ರಕ್ಷಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net