ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Fist hand power logo. Protest strong fist raised fight icon
Fist hand power logo. Protest strong fist raised fight icon, rebel illustration
Published on

ಮೈಸೂರು: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ಸೆ.9ರಂದು ಬೆಳಗ್ಗೆ 11ಕ್ಕೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಡಾ.ಎನ್.ಮೂರ್ತಿ ತಿಳಿಸಿದರು.

ಅಂದು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮೆರವಣಿಗೆ ಮೂಲಕ ತೆರಳಿ ಆಯಾ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಗುವುದು. ಜತೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಮುಖ್ಯಮಂತ್ರಿಗಳ ನಿವಾಸಕ್ಕೆ ರ‌್ಯಾಲಿ ನಡೆಸಿ ಒಳ ಮೀಸಲಾತಿ ಅನುಷ್ಠಾನಕ್ಕೆ ಒತ್ತಾಯಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪರಿಶಿಷ್ಟರ ಮೀಸಲಾತಿ ಪರಿಶಿಷ್ಟ ಜನಾಂಗದ 101 ಜಾತಿಗಳಲ್ಲಿ ಸಮನಾಗಿ ಹಂಚಿಕೆಯಾಗಿಲ್ಲ ಎಂದು 30 ದಶಕಗಳಿಂದ ರಾಜ್ಯಾದ್ಯಂತ ನಿರಂತರವಾಗಿ ಹೋರಾಟಗಳು ನಡೆಯುತ್ತಿವೆ. ಹೋರಾಟದಲ್ಲಿ ಹಲವಾರು ಹೋರಾಟಗಾರರು ಜೀವ, ಜೀವನ ಕಳೆದುಕೊಂಡಿದ್ದಾರೆ. ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಮಾಡಲು ಕರ್ನಾಟಕ, ಆಂಧ್ರ, ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ನಡೆದ ಹೋರಾಟಗಳ ಹಿನ್ನೆಲೆಯಲ್ಲಿ ಹತ್ತಾರು ರಾಜ್ಯ ಸರ್ಕಾರಗಳು ರಚಿಸಿದ ಆಯೋಗಗಳು ನೀಡಿದ ವರದಿಗಳನ್ನು ಪರಿಶೀಲಿಸಿದ ಸುಪ್ರೀಂ ಕೋರ್ಟ್ 7 ನ್ಯಾಯಾಧೀಶರ ಸಂವಿಧಾನ ಪೀಠ ಆ.1ರಂದು ಐತಿಹಾಸಿಕ ತೀರ್ಪು ನೀಡಿ ಈ ವಿವಾದಕ್ಕೆ ತೆರೆ ಎಳೆದಿದೆ. ಹೀಗಾಗಿ, ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net