ಸ್ಥಳೀಯ ಕಾರ್ಮಿಕರಿಗೆ ಆದ್ಯತೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

karmika rakshana vedike
ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ವಲಸೆ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದ್ದು, ಸ್ಥಳೀಯ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗಿದೆ. ಹಾಗಾಗಿ ಸ್ಥಳೀಯ ಕಾರ್ಮಿಕರಿಗೆ ಮೊದಲು ಆದ್ಯತೆ ನೀಡುವಂತೆ ಒತ್ತಾಯಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ಗುರುವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ನಗರವೂ ಸೇರಿ ಇಡೀ ಜಿಲ್ಲೆಯಲ್ಲಿ ಉದ್ದಿಮೆಗಳು, ಸಣ್ಣ-ಪುಟ್ಟ ಕಾರ್ಖಾನೆಗಳು, ಹೋಟೆಲ್‌ಗಳ ಮಾಲೀಕರು ಹೊರ ರಾಜ್ಯಗಳಿಂದ ಬಂದ ಕಾರ್ಮಿಕರಿಗೆ ಆದ್ಯತೆ ನೀಡುತ್ತಿದ್ದಾರೆ. ಇದರಿಂದ ಸ್ಥಳೀಯ ಕಾರ್ಮಿಕರಿಗೆ ಕೆಲಸವೇ ಇಲ್ಲದಂತಾಗಿದೆ ಎಂದು ಅಸಮಾಧಾನ ಹೊರಹಾಕಿದರು.
ಕಟ್ಟಡ, ಹೋಟೆಲ್, ಸಣ್ಣ ಕೈಗಾರಿಕೆಗಳ ಮಾಲೀಕರಿಗೆ ಜಿಲ್ಲಾಧಿಕಾರಿಗಳು ಸ್ಥಳೀಯ ಕಾರ್ಮಿಕರಿಗೆ ಆದ್ಯತೆ ನೀಡಬೇಕು ಎಂದು ಎಚ್ಚರಿಕೆ ನೀಡಬೇಕು. ಇಲ್ಲದಿದ್ದರೆ ಅವರ ಪರವಾನಗಿಗಳನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಪ್ರಮುಖರಾದ ಪ್ರಶಾಂತ್, ರವಿ ಸಾಧುಶೆಟ್ಟಿ, ಲಿಂಗರಾಜು, ಬಿ.ರಾಘವೇಂದ್ರ, ಸತೀಶ್‌ಗೌಡ, ಅಕ್ಬರ್ ಬಾಷಾ, ಲೋಕೇಶ್, ಪ್ರಾೃಕ್ಲಿನ್ ಸಾಲೋಮನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net