ಭದ್ರತಾ ಮಂಡಳಿ ರಚಿಸಲು ಆಗ್ರಹಿಸಿ ಪ್ರತಿಭಟನೆ

protest
ಅಸಂಘಟಿತ ಕಾರ್ಮಿಕರ ನೆರವಿಗೆ ಭದ್ರತಾ ಮಂಡಳಿ ರಚಿಸುವಂತೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯಲ್ಲಿ ಕುಪೇಂದ್ರ ಮಾತನಾಡಿದರು. ರಮೇಶ್ ಮಡಿವಾಳ, ಪ್ರದೀಪ್ ಹೊನ್ನಪ್ಪ, ಸುರೇಖಾ ಪಾಲಾಕ್ಷಪ್ಪ, ಲೋಲಾಕ್ಷಿ, ವೈ.ಚಂದ್ರಶೇಖರ್ ಇತರರಿದ್ದರು.
Published on

ಶಿವಮೊಗ್ಗ: ಅಸಂಘಟಿತ ಕಾರ್ಮಿಕರಿಗೆ ಸಹಾಯಹಸ್ತ ನೀಡುವ ಉದ್ದೇಶದಿಂದ ಸಾಮಾಜಿಕ ಭದ್ರತಾ ಮಂಡಳಿ ರಚಿಸಬೇಕೆಂದು ಆಗ್ರಹಿಸಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ಪ್ರಮುಖರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟಿಸಿದರು.

ಅಂಬೇಡ್ಕರ್ ಸಹಾಯಹಸ್ತ ಯೋಜನೆಯಡಿ ಕಮ್ಮಾರರು, ಚಮ್ಮಾರರು, ಕುಂಬಾರರು, ಮಡಿವಾಳರು, ಭಟ್ಟಿ ಕಾರ್ಮಿಕರು, ಚಿಂದಿ ಆಯುವವರು, ಮನೆ ಕೆಲಸ ಮಾಡುವವರು, ಕ್ಷೌರಿಕರು, ಟೈಲರ್‌ಗಳು, ಅಡುಗೆ ಕಾರ್ಮಿಕರು, ಬ್ಯೂಟಿ ಪಾರ್ಲರ್ ಕಾರ್ಮಿಕರು, ಹೋಟೆಲ್, ಬೀದಿಬದಿ ವ್ಯಾಪಾರಿಗಳು, ಬೀಡಿ ಕಟ್ಟುವವರು ಹೀಗೆ ಹಲವು ವರ್ಗದ ಜನರು ಅಸಂಘಟಿಕ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸಾಮಾಜಿಕ ಭದ್ರತಾ ಮಂಡಳಿ ರಚನೆ ಮಾಡಬೇಕು. ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಅಸಂಘಟಿತ ಕಾರ್ಮಿಕ ಸೆಸ್ ವಿಧಿಸಬೇಕು. ಈ ಹಣದಲ್ಲಿ ಅಸಂಘಟಿತ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಬೇಕು ಎಂದು ಆಗ್ರಹಿಸಿದರು.

ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಕುಪೇಂದ್ರ ಆಯನೂರು, ಅಧ್ಯಕ್ಷ ಪ್ರದೀಪ್ ಹೊನ್ನಪ್ಪ, ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ, ನಗರಾಧ್ಯಕ್ಷ ವೈ.ಚಂದ್ರಶೇಖರ್, ಮಹಿಳಾ ವಿಭಾಗದ ಕಾರ್ಯದರ್ಶಿ ಸುರೇಖಾ ಪಾಲಾಕ್ಷಪ್ಪ, ಪ್ರಮುಖರಾದ ರೂಪಾ, ರಮೇಶ್, ಅಶ್ವಿನಿ ಗೌಡ, ಮಂಜುನಾಥ್, ಲೋಲಾಕ್ಷಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net