ಹಕ್ಕುಪತ್ರ ನೀಡಲು ಆಗ್ರಹಿಸಿ ಪ್ರತಿಭಟನೆ

protest
ಶಿವಮೊಗ್ಗ ತಾಲೂಕು ರಾಮೇನಕೊಪ್ಪದಲ್ಲಿ ಮನೆಗಳಿಗೆ ಹಕ್ಕುಪತ್ರ ನೀಡುವಂತೆ ಒತ್ತಾಯಿಡಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆಯ ವಾಟಾಳ್ ಮಂಜುನಾಥ್, ಸ್ಥಳೀಯರಾದ ಚಂದ್ರಪ್ಪ, ಲೋಕೇಶ್, ಮಂಜುಳಾ, ರವಿಕುಮಾರ್, ಮಂಜಮ್ಮ, ರವಿಕುಮಾರ್ ಮುಂತಾದವರಿ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Published on

ಶಿವಮೊಗ್ಗ: ತಾಲ್ಲೂಕಿನ ರಾಮೇನಕೊಪ್ಪದಲ್ಲಿ ಹಲವಾರು ವರ್ಷಗಳಿಂದ ವಾಸವಾಗಿರುವವರ ಮನೆಗಳಿಗೆ ಹಕ್ಕುಪತ್ರ ನೀಡಬೇಕು. ಆ ಭಾಗದಲ್ಲಿ ಸ್ವಂತ ಸೂರು ಇಲ್ಲದವರಿಗೆ ನಿವೇಶನ ವಿತರಣೆ ಮಾಡಬೇಕೆಂದು ಆಗ್ರಹಿಸಿ ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಪದಾಕಾರಿಗಳು ಬುಧವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ರಾಮೇನಕೊಪ್ಪದಲ್ಲ ಹಲವಾರು ವರ್ಷಗಳಿಂದ ಹಿಂದುಳಿದ ವರ್ಗಗಳ ಜನಾಂಗದವರು ದಿನನಿತ್ಯ ಕೂಲಿ ಮಾಡಿ ಬದುಕು ಸಾಗಿಸುತ್ತಿದ್ದಾರೆ. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡಿದ್ದಾರೆ. ಇವರಿಗೆ ಮೂಲ ಸೌಲಭ್ಯಗಳು ಸಮರ್ಪಕವಾಗಿ ಸಿಕ್ಕಿಲ್ಲ. ಹಕ್ಕುಪತ್ರವೂ ದೊರೆತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಸ್ಥಳೀಯ ಗ್ರಾಪಂನಿಂದ ನಿವೇಶನವನ್ನೂ ಹಂಚಿಕೆ ಮಾಡಿಲ್ಲ. ನಮ್ಮ ಬೇಡಿಕೆ ಈಡೇರದೇ ಇದ್ದರೆ ಮುಂಬರುವ ದಿನಗಳಲ್ಲಿ ತಹಸೀಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್, ಗ್ರಾಮಸ್ಥರಾದ ಲೋಕೇಶ್, ಮಂಜಮ್ಮ, ಚಂದ್ರಪ್ಪ, ಚಿಕ್ಕಮ್ಮ, ಮಂಜುಳಾ, ರವಿಕುಮಾರ್, ಸೀಮಾ, ಹರ್ಷ, ಶಾಂತಾಲಕ್ಷ್ಮೀ, ಪಕೀರಮ್ಮ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net