ಚಿಂತಾಮಣಿ:ಬೈಕ್ ಮತ್ತು ಖಾಸಗಿ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರನನ್ನು ಹೆಚ್ಚಿನ ಚಿಕಿತ್ಸೆಗೆ ಕರೆದೊಯ್ಯಲು ಸಮಯಕ್ಕೆ ಸರಿಯಾಗಿ ಆಂಬುಲೆನ್ಸ್ ಬಾರದ ಕಾರಣ ರೊಚ್ಚಿಗೆದ್ದ ಗ್ರಾಮಸ್ಥರು ಬಟ್ಲಹಳ್ಳಿ ಆಸ್ಪತ್ರೆ ಮುಂದು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅಪಘಾತದಲ್ಲಿ ಗಾಯಗೊಂಡಿದ್ದ ಅಜಯ್ (22) ಎಂಬಾತನನ್ನುಸ್ಥಳಿಯರು ಬಟ್ಲಹಳ್ಳಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗೆ ಬೇರೆಡೆ ಕರೆದೊಯ್ಯಲು ಆಂಬುಲೆನ್ಸ್ ನಿಗದಿತ ಅವಧಿಗೆ ಬಂದಿರಲಿಲ್ಲ. ಸ್ಥಳಕ್ಕೆ ಆಗಮಿಸಿದ ನೋಡೆಲ್ ಅಧಿಕಾರಿ ಚಂದ್ರಮೋಹನ್ ಆಂಬುಲೆನ್ಸ್ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.ಬಟ್ಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಂಬುಲೆನ್ಸ್ಗಾಗಿ ಎರಡು ತಿಂಗಳಿನಿಂದ ಸುತ್ತಲಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದರೂ ಆಂಬುಲೆನ್ಸ್ ಸೌಲಭ್ಯ ಒದಗಿಸುವಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.