ಪ್ರತಿಭಟನೆಗೆ ಪ್ರತಿಯಾಗಿ ಮತ್ತೊಂದು ಪ್ರತಿಭಟನೆ; ಸಂಸದೆ ಸುಮಲತಾ ಎದುರು ಧಿಕ್ಕಾರ ಕೂಗಿದ ರೈತರು..

Sumalatha
Published on

ಮಂಡ್ಯ: ಸಕ್ಕರೆನಾಡಿನಲ್ಲಿ ನಿನ್ನೆ ನಡೆದಿದ್ದ ಪ್ರತಿಭಟನೆಗೆ ಪ್ರತಿಯಾಗಿ ಇಂದು ಮತ್ತೊಂದು ಪ್ರತಿಭಟನೆ ನಡೆದಿದ್ದು, ಪ್ರತಿಭಟನಾಕಾರರು ಸಂಸದೆ ಸುಮಲತಾ ಅಂಬರೀಷ್ ಎದುರೇ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಚಿಕ್ಕಮಂಡ್ಯ ಗ್ರಾಮದ ಬಳಿ ಈ ಪ್ರತಿಭಟನೆ ನಡೆದಿದೆ.

ಇಲ್ಲಿನ ನಾಲೆಯೊಂದನ್ನು ಒಡೆಯಬೇಕು ಎಂದು ನಿನ್ನೆ ಬೀಡಿ ಕಾಲನಿ ಜನರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಜಿಲ್ಲಾಧಿಕಾರಿಯ ಕಚೇರಿಗೆ ನುಗ್ಗಿ ಶಾಶ್ವತ ಪರಿಹಾರಕ್ಕಾಗಿ ಪಟ್ಟು ಹಿಡಿದಿದ್ದರು. ನಾಲೆ ಒಡೆದು ಬೀಡಿ ಕಾಲನಿಗೆ ನೀರು ನುಗ್ಗುವುದನ್ನು ತಪ್ಪಿಸಿ ಎಂದು ಪ್ರತಿಭಟನೆ ನಡೆಸಿದ್ದರು. ಆ ಬಗ್ಗೆ ಡಿಸಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈ ಬಿಟ್ಟಿದ್ದರು.

ನಾಲೆ ಒಡೆದು ಹಾಕಿದರೆ 750 ಎಕರೆ ಜಮೀನಿಗೆ ಹಾನಿಯಾಗುತ್ತದೆ. ಹೀಗಾಗಿ ನಾಲೆ ಒಡೆಯಬಾರದು ಎಂದು ರೈತರ ಪಟ್ಟುಹಿಡಿದಿದ್ದರು. ಸ್ಥಳದಲ್ಲಿ ತಹಶೀಲ್ದಾರ್ ಭರವಸೆ ಕೊಟ್ಟ ಬಳಿಕ ಪ್ರತಿಭಟನೆ ಕೈ ಬಿಟ್ಟ ಚಿಕ್ಕಮಂಡ್ಯ ಗ್ರಾಮಸ್ಥರು, ನಂತರ ಸಂಸದೆ ಸುಮಲತಾ ಅವರನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ತಹಶೀಲ್ದಾರ್​ ಹಾಗೂ ಸಂಸದೆ ಇಬ್ಬರೂ ನಾಲೆ ಒಡೆಸುವುದಿಲ್ಲ ಎಂದು ಭರವಸೆ ಕೊಟ್ಟ ಬಳಿಕ ಗ್ರಾಮಸ್ಥರು ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net