ಮಾಜಿ ಸಿಎಂ ವಿರುದ್ಧ ಸ್ಪರ್ಧೆಗೆ ಹೆಮ್ಮೆ

Published on

ಕೋಲಾರ: ವಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಲ್ಲಿ ಸ್ಪರ್ಧೆ ವಾಡುವುದನ್ನು ಸ್ವಾಗತಿಸುತ್ತೇನೆ. ಅಂತಹ ವ್ಯಕ್ತಿಯ ವಿರುದ್ಧ ಸ್ಪರ್ಧೆ ವಾಡುವುದಕ್ಕೆ ನನಗೆ ಹೆಮ್ಮೆಯಿದೆ. ಜೆಡಿಎಸ್ ಕಾರ್ಯಕರ್ತರು ಸೈನಿಕರಂತೆ ಪಕ್ಷದ ಗೆಲುವಿಗೆ ಶ್ರಮಿಸಲಿದ್ದಾರೆ ಎಂದು ಜೆಡಿಎಸ್ ಘೋಷಿತ ಅಭ್ಯರ್ಥಿ ಸಿ.ಎಂ.ಆರ್.ಶ್ರೀನಾಥ್ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಾತನಾಡಿ, ರಾಜ್ಯದಲ್ಲಿ ವಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ವಾಜಿ ಸಿಎಂ ಕುವಾರಸ್ವಾಮಿ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರನ್ನು ಎದುರಿಸುವ ಶಕ್ತಿ ಕಾರ್ಯಕರ್ತರಿಗೆ ಇದೆೆ. ಕ್ಷೇತ್ರದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳನ್ನು ಕ್ಷೇತ್ರದ ಜನತೆ ತಿರಸ್ಕರಿಸಿ ಜೆಡಿಎಸ್ ಪಕ್ಷಕ್ಕೆ ಅಧಿಕಾರ ನೀಡಲಿದ್ದಾರೆ ಎಂದರು.

ಸ್ಥಳೀಯರು ಹಾಗೂ ಕ್ಷೇತ್ರದ ಜನತೆಯ ಕಷ್ಟಗಳಿಗೆ ಸ್ಪಂದಿಸುವ ವ್ಯಕ್ತಿಯನ್ನು ಆರಿಸಬೇಕೆಂದು ಈಗಾಗಲೇ ಜನ ತೀರ್ವಾನಿಸಿದ್ದಾರೆ. ಜತೆಗೆ ಜೆಡಿಎಸ್ ಪಂಚರತ್ನ ಯೋಜನೆಗಳು ಜನಪರವಾಗಿವೆ. ಕೋಲಾರದಲ್ಲಿ ಸ್ಥಳೀಯ ವ್ಯಕ್ತಿಗೆ ವಾನ್ಯತೆ ಸಿಗುತ್ತದೆ. ಕ್ಷೇತ್ರದ ಜನತೆ ಪ್ರಬುದ್ಧರಾಗಿದ್ದು, ಎಲ್ಲ ವಿಷಯಗಳ ಬಗ್ಗೆ ತೀರ್ವಾನ ವಾಡಿ ಮತ ನೀಡಲಿದ್ದಾರೆ. ಈಗಾಗಲೇ ಜೆಡಿಎಸ್ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಾಡಿದೆ. ಎದುರಾಳಿಯಾಗಿ ಯಾರೇ ಸ್ಪರ್ಧೆ ವಾಡಿದರೂ ಪಕ್ಷದ ಅಭ್ಯರ್ಥಿ ಸಿಎಂಆರ್ ಶ್ರೀನಾಥ್ ಆಗಿರುತ್ತಾರೆ, ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲವೆಂದು ಕುವಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net