ಅಂಗನವಾಡಿಗಳಿಗೆ ನೀರು ಪೂರೈಕೆಯ ವರದಿ ನೀಡಿ

Published on

ಚಿಕ್ಕಬಳ್ಳಾಪುರ: ಅಂಗನವಾಡಿ ಕೇಂದ್ರಗಳಲ್ಲಿನ ನೀರು ಪೂರೈಕೆ ವ್ಯವಸ್ಥೆ ಬಗ್ಗೆ ವರದಿ ನೀಡಲು ಜಿಪಂ ಸಿಇಒ ಡಾ. ವೈ.ನವೀನ್​ ಭಟ್​ ಮಹಿಳಾ ಮತ್ತು ಮಕ್ಕಳ ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯತೆ ವಹಿಸಿ ಮಾತನಾಡಿದರು.ಜಲ ಜೀವನ್​ ಮಿಷನ್​ ಯೋಜನೆಯಡಿ ಗ್ರಾಮೀಣ ಭಾಗದ ಅಂಗನವಾಡಿ ಕಟ್ಟಡಗಳು, ಸರ್ಕಾರಿ ಶಾಲಾ ಕಾಲೇಜುಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಳ ಸಂಪರ್ಕ ವ್ಯವಸ್ಥೆ ಕಲ್ಪಿಸಿ, ನೀರು ಪೂರೈಸಲು ಅವಕಾಶವಿದೆ. ಈ ಸೌಲಭ್ಯವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.ಯಾವುದೇ ಅಂಗನವಾಡಿ ಕೇಂದ್ರಗಳಿಗೆ ನಳ ಸಂಪರ್ಕ ಇಲ್ಲದೆ ನೀರು ಪೂರೈಕೆಯ ವ್ಯವಸ್ಥೆ ಇಲ್ಲದಿದ್ದಲ್ಲಿ ಕೂಡಲೇ ಮಾಹಿತಿ ನೀಡಲು ಹಿಂದೆ ಸೂಚಿಸಲಾಗಿತ್ತು. ಆದರೂ ಇಲ್ಲಿಯವರೆಗೆ ವರದಿ ಸಲ್ಲಿಸಿಲ್ಲ. ಇನ್ನೂ ರ್ನಿಲ್ಯ ತೋರಿದರೆ ನಿರ್ದಾಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜಲಜೀವನ್​ ಮಿಷನ್​ ಯೋಜನೆಯಡಿಯಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಕುರಿತಂತೆ ಚರ್ಚಿಸಿ, ನೀರು ಮತ್ತು ನೈರ್ಮಲ್ಯ ಸಮಿತಿಯಲ್ಲಿ ಅನುಮೋದನೆ ನೀಡಲಾಯಿತು. ಜಿಪಂ ಉಪ ಕಾರ್ಯದರ್ಶಿ ಅತಿಕ್​ ಪಾಷ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net