

ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ಅವರು 11 ವರ್ಷದ ಆಡಳಿತ ಅವಧಿಯಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಬಡವರು, ರೈತರು, ಮಹಿಳೆಯರು, ಯುವಕರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್ ಹೇಳಿದರು.
ನಗರ ಹಾಗೂ ಗ್ರಾಮಾಂತರ ಮಂಡಲದ ಹಿರಿಯೂರು ಮಹಾಶಕ್ತಿ ಕೇಂದ್ರ ಬಾರಂದೂರಿನಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಂಕಲ್ಪ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ದೊರೆಯುವಂತಾಗಬೇಕು. ಹಾಗೆಯೇ ಭಾರತ ದೇಶ ಜಗತ್ತಿನ ಸುಖ, ಶಾಂತಿ, ನೆಮ್ಮದಿಗಾಗಿ ಸರ್ವಶಕ್ತ ರಾಷ್ಟ್ರವಾಗಬೇಕು ಎಂಬುದಾಗಿ ಮೋದಿ ಅವರು ಸಂಕಲ್ಪ ಮಾಡಿದ್ದಾರೆ. ಅವರೊಂದಿಗೆ ನಾವೆಲ್ಲರೂ ಕೈಜೋಡಿಸಬೇಕು ಎಂದರು.
ಗ್ರಾಮಾಂತರ ಮಂಡಲದ ಅಧ್ಯಕ್ಷ ಕೆ.ಎಚ್.ತೀರ್ಥಯ್ಯ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಪ್ರಸನ್ನಕುಮಾರ್, ಯುವ ಮೋರ್ಚಾ ಕಾರ್ಯದರ್ಶಿ ಭರತ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ.ಹರಿಕೃಷ್ಣ, ಮಂಡಲದ ಅಧ್ಯಕ್ಷ ಜಿ.ಧರ್ಮಪ್ರಸಾದ್, ಸತೀಶ್, ಶಾಂತಣ್ಣ, ತೀರ್ಥಪ್ಪ, ಹನುಮಂತನಾಯ್ಕ, ಅಣ್ಣಪ್ಪ ಇತರರಿದ್ದರು.