ಗ್ರಾಮ ಆಡಳಿತಾಧಿಕಾರಿಗಳಿಗೆ ಸೌಲಭ್ಯ ಒದಗಿಸಿ

Provide facilities to village administrators
ರಬಕವಿ-ಬನಹಟ್ಟಿ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ ಪ್ರಾರಂಭಿಸಿದರು. ಮಲ್ಲಿಕಾರ್ಜುನ ಖವಟಕೊಪ್ಪ, ಬಸವರಾಜ ಹನಗಂಡಿ, ಸದಾಶಿವ ಕುಂಬಾರ, ಅರಬಾಜ ಜಮಖಂಡಿ ಮತ್ತಿತರರಿದ್ದಾರೆ.
Published on

ರಬಕವಿ/ಬನಹಟ್ಟಿ : ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲ ಸೌಲಭ್ಯ, ಸೇವಾ ಸೌಲಭ್ಯ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ಸೋಮವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಗ್ರಾಮ ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಖವಟಕೊಪ್ಪ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಸರಿಯಾದ ಮೂಲಸೌಲಭ್ಯಗಳನ್ನು ನೀಡುತ್ತಿಲ್ಲ. ಈ ಕುರಿತು ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ನಮ್ಮ ಬೇಡಿಕೆ ಈಡೇರುವವರೆಗೆ ಮುಷ್ಕರ ಮುಂದುವರಿಯಲಿದೆ ಎಂದರು.

ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ನಿಗದಿಪಡಿಸಿ ಆದೇಶ ನೀಡಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಸೌಲಭ್ಯ ಕಲ್ಪಿಸಬೇಕು. ಅಂತರ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ 16ಎ ಉಪಖಂಡ(2)ನ್ನು ಮರುಸ್ಥಾಪಿಸಬೇಕು ಅಥವಾ ಇತರ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರಚಿಸಬೇಕು. ಈ ಎಲ್ಲ ಬೇಡಿಕೆ ಈಡೇರಿಸುವವರಿಗೂ ಮುಷ್ಕರ ನಿಲ್ಲುವುದಿಲ್ಲ ಎಂದರು.

ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಹನಗಂಡಿ ಮುಷ್ಕರಕ್ಕೆ ಬೆಂಬಲ ಸೂಚಿಸಿದರು.

ಗ್ರಾಮ ಲೆಕ್ಕಾಧಿಕಾರಿಗಳಾದ ಸದಾಶಿವ ಕುಂಬಾರ, ಅರಬಾಜ ಜಮಖಂಡಿ, ಬಸವರಾಜ ಗುಂಡಿ, ಮಂಜುನಾಥ ನೀಲನ್ನವರ, ರಾಚಯ್ಯ ಮಠಪತಿ, ಅಮೋಘಸಿದ್ದ ಬಿರಾದಾರ, ವೀರೇಶ ಗೋಕಾಕ, ಸೌರಭ ಮೇತ್ರಿ, ರೇವಣಸಿದ್ದಪ್ಪ ಕಾಮಟೆ, ಚಂದ್ರಕಾಂತ ಹೊಸಮನಿ, ರವಿ ಈಟಿ, ಶಬಾನಾ ಜಮಾದಾರ, ತ್ರೀವೇಣಿ ದೇವರಮನಿ, ದೀಪಾ ಮೇತ್ರಿ, ಸಂಗೀತಾ ವಾಲಿಕರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net