ಮಾರುಕಟ್ಟೆಯಲ್ಲಿ ಮೂಲ ಸೌಕರ್ಯ ಕಲ್ಪಿಸಿ

jds
ಶಿವಮೊಗ್ಗ ವಿನೋಬನಗರ ಶಿವಾಲಯ ಪಕ್ಕದ ಮಾರುಕಟ್ಟೆಗೆ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಜೆಡಿಎಸ್ ಮುಖಂಡರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ದೀಪಕ್ ಸಿಂಗ್, ಸಂಜಯ್ ಕಶ್ಯಪ್, ಉಮೇಶ್, ಚಂದ್ರಮ್ಮ, ರತ್ನಾಬಾಯಿ, ಕೃಷ್ಣಮೂರ್ತಿ ಇತರರಿದ್ದರು.
Published on

ಶಿವಮೊಗ್ಗ: ವಿನೋಬನಗರ ಶಿವಾಲಯ ಪಕ್ಕದಲ್ಲಿರುವ ಹೂವು, ಹಣ್ಣು, ತರಕಾರಿ ಮಾರುಕಟ್ಟೆಯಲ್ಲಿ ಮೂಲ ಸೌಕರ್ಯದ ಕೊರತೆಯಿಂದ ವ್ಯಾಪಾರಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲಾಡಳಿತ ಮೂಲ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಜೆಡಿಎಸ್ ನಗರ ಘಟಕದ ನೇತೃತ್ವದಲ್ಲಿ ವ್ಯಾಪಾರಸ್ಥರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರ ಪಾಲಿಕೆಯಿಂದ ನಿರ್ಮಾಣವಾದ ಮಾರುಕಟ್ಟೆಯಲ್ಲಿ ಲಕ್ಷ್ಮೀ ಟಾಕೀಸ್ ವೃತ್ತ, ವಿನೋಬನಗರ ಪೊಲೀಸ್ ಚೌಕಿಯ ಬೀದಿ ಬದಿಯಲ್ಲಿ ವ್ಯಾಪಾರ ಮಾಡುತ್ತಿದ್ದ ಹೂವು, ಹಣ್ಣು, ತರಕಾರಿ ಮಾರಾಟಗಾರರಿಗೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಸೂಕ್ತ ಸೌಲಭ್ಯ ಇಲ್ಲದ ಕಾರಣ ಮಾರಾಟಗಾರರು ಮತ್ತೆ ಬೀದಿಗೆ ಬರುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾರುಕಟ್ಟೆ ಮುಂಭಾಗ ಸರಿಯಾದ ಬೆಳಕಿನ ವ್ಯವಸ್ಥೆಯಿಲ್ಲ. ಪ್ರವೇಶ ದ್ವಾರ ಕಿರಿದಾಗಿರುವ ಕಾರಣ ನಾಗರಿಕರು ಮಾರುಕಟ್ಟೆಯೊಳಗೆ ಬರಲು ಹಿಂದೇಟು ಹಾಕುತ್ತಾರೆ. ಹೀಗಾಗಿ ವ್ಯಾಪಾರಿಗಳು ಮಾರುಕಟ್ಟೆಯಿಂದ ಹೊರಬರುವಂತಾಗಿದೆ. ಇದರಿಂದ ಮಾರುಕಟ್ಟೆ ನಿರ್ಮಾಣದ ಆಶಯಕ್ಕೆ ಭಂಗ ಬಂದಿದೆ. ಈಗ ಉಂಟಾಗಿರುವ ಲೋಪಗಳನ್ನು ಸರಿಪಡಿಸಬೇಕು. ವ್ಯಾಪಾರ ಮಾಡಲು ಪೂರಕ ವಾತಾವರಣ ನಿರ್ಮಿಸಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.
ಜೆಡಿಎಸ್ ನಗರಾಧ್ಯಕ್ಷ ದೀಪಕ್ ಸಿಂಗ್, ಪ್ರಮುಖರಾದ ಸಂಜಯ್ ಕಶ್ಯಪ್, ಕೆ.ಟಿ.ರಾಜಮ್ಮ, ಉಮೇಶ್, ರತ್ನಾಬಾಯಿ, ಚಂದ್ರಮ್ಮ, ಶಾಂತಮ್ಮ, ಕೃಷ್ಣಮೂರ್ತಿ, ಮಹೇಶ್ವರಿ, ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net