ಹಳೇ ಬೊಮ್ಮನಕಟ್ಟೆಗೆ ಮೂಲ ಸೌಕರ್ಯ ಕಲ್ಪಿಸಿ

manavi
ಬೊಮ್ಮನಕಟ್ಟೆಯಲ್ಲಿ ಮೂಲಸೌಕರ್ಯಕ್ಕೆ ಆಗ್ರಹಿಸಿ ಬಿ.ರಘು, ಪ್ರಶಾಂತ್, ಅನಿಲ್, ವಿನಯ್‌ಕುಮಾರ್, ಗಿರಿ, ರಮೇಶ್ ಮುಂತಾದವರು ಆಯುಕ್ತ ಕೆ.ಮಾಯಣ್ಣ ಗೌಡ ಅವರಿಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಹಳೇ ಬೊಮ್ಮನಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಇಕ್ಕೆಲಗಳಲ್ಲಿ ಮೂಲ ಸೌಕರ್ಯ ಸಮರ್ಪಕವಾಗಿಲ್ಲ. ನಗರ ಪಾಲಿಕೆಯಿಂದ ಮೂಲ ಸೌಕರ್ಯ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಬೊಮ್ಮನಕಟ್ಟೆ ಮುಖ್ಯರಸ್ತೆ ಕ್ಷೇಮಾಭಿವೃದ್ಧಿ ಸಮಿತಿ ಪ್ರಮುಖರು ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಅವರಿಗೆ ಮನವಿ ಸಲ್ಲಿಸಿದರು.

ಬಾಕ್ಸ್ ಚರಂಡಿ ನಿರ್ಮಾಣವಾಗಿಲ್ಲ. ಯುಜಿಡಿ ಸಂಪರ್ಕವೂ ಇಲ್ಲ. ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಕೆಲ ದಿನಗಳ ಹಿಂದೆ ಕಲುಷಿತ ನೀರು ಪೂರೈಕೆಯಾಗಿ ಈ ಭಾಗದ ಜನರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಇಲ್ಲಿ ಸೊಳ್ಳೆ ಕಾಟ ವಿಪರೀತವಾಗಿರುವುದರಿಂದ ಡೆಂೆ, ಚಿಕೂನ್‌ಗುನ್ಯಾ ಮುಂತಾದ ಕಾಯಿಲೆಗಳೂ ಕಾಣಿಸಿಕೊಳ್ಳುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ನಗರ ಪಾಲಿಕೆ ಮಾಜಿ ನಾಮನಿರ್ದೇಶಿತ ಸದಸ್ಯ ಬಿ.ರಘು, ಅನಿಲ್, ಪ್ರಶಾಂತ್, ವಿನಯ್‌ಕುಮಾರ್, ರಮೇಶ್, ಗಿರಿ ಮುಂತಾದವರು ಮನವಿ ಸಲ್ಲಿಸುವ ಸಂದರ್ಭದಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net