ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ

16 SGR 2
ಸಾಗರ ಉಪವಿಭಾಗೀಯ ಆಸ್ಪತ್ರೆಯಲ್ಲಿ ಊಟದ ವ್ಯವಸ್ಥೆಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲಿಸಿದರು. ಗಣಪತಿ ಮಂಡಗಳಲೆ, ಮಧುಮಾಲತಿ, ಸುರೇಶ್‌ಬಾಬು, ಸೋಮಶೇಖರ ಲ್ಯಾವಿಗೆರೆ ಇತರರಿದ್ದರು.
Published on

ಸಾಗರ: ಸರ್ಕಾರಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಹಾಗೂ ಒಳರೋಗಿಗಳಿಗೆ ಉತ್ತಮ ಆಹಾರ ನೀಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಉಪವಿಭಾಗೀಯ ಆಸ್ಪತ್ರೆಯಲ್ಲಿ ಆಸ್ಪತ್ರೆ ಒಳರೋಗಿಗಳಿಗೆ ನೀಡುವ ಊಟದ ವ್ಯವಸ್ಥೆ ಪರಿಶೀಲಿಸಿ ಮಾತನಾಡಿ, ಕಣ್ಣಿನ ವೈದ್ಯರು ಹೊರತುಪಡಿಸಿ ಎಲ್ಲ ವಿಭಾಗದ ವೈದ್ಯರಿದ್ದು ಉತ್ತಮ ಆರೋಗ್ಯ ಸೇವೆ ಸಿಗುತ್ತಿದೆ. ಆಹಾರ ಪೂರೈಕೆ ವ್ಯವಸ್ಥೆಯಲ್ಲಿ ಲೋಪ ಇರುವುದು ಗಮನಕ್ಕೆ ಬಂದಿತ್ತು. ಇದೀಗ ಹೊಸ ಗುತ್ತಿಗೆದಾರರು ಆಹಾರ ಪೂರೈಕೆ ಮಾಡುತ್ತಿದ್ದಾರೆ. ಪೂರೈಕೆಯಲ್ಲಿ ಲೋಪ ಇರಬಾರದು ಎಂದು ತಿಳಿಸಿದರು.

ಸಾಗರ ಉಪವಿಭಾಗೀಯ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಬಜೆಟ್‌ನಲ್ಲಿ ಹೆಚ್ಚಿನ ಹಣ ಘೋಷಣೆಯಾಗುವ ಸಾಧ್ಯತೆ ಇದೆ. ಆಸ್ಪತ್ರೆ ಮೂಲಸೌಲಭ್ಯ ಅಭಿವೃದ್ಧಿಗೆ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗುವುದು. ಉಪವಿಭಾಗೀಯ ಆಸ್ಪತ್ರೆ, ತಾಯಿ-ಮಗು ಆಸ್ಪತ್ರೆ ಅಭಿವೃದ್ದಿಗೆ ಎಲ್ಲ ಸೌಕರ್ಯ ಕಲ್ಪಿಸಲಾಗುತ್ತದೆ ಎಂದರು.

ಪ್ರಮುಖರಾದ ಮಧುಮಾಲತಿ, ಗಣಪತಿ ಮಂಡಗಳಲೆ, ಸುರೇಶಬಾಬು, ಸೋಮಶೇಖರ ಲ್ಯಾವಿಗೆರೆ, ಜಯರಾಮ್, ಲಲಿತಮ್ಮ, ನಾರಾಯಣ ಅರಮನೆಕೇರಿ, ರಮೇಶ್ ಚಂದ್ರಗುತ್ತಿ, ತಾರಾಮೂರ್ತಿ, ಎಲ್.ಚಂದ್ರಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net