ಪಕ್ಷೇತರರಿಗೂ ಮತದಾರರ ಪಟ್ಟಿ ಒದಗಿಸಿ

manvi
ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಗಳಿಗೂ ಮತದಾರರ ಪಟ್ಟಿ ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿ ಎಡಿಸಿ ಸಿದ್ದಲಿಂಗ ರೆಡ್ಡಿ ಮೂಲಕ ಮುಖ್ಯ ಚುನಾವಣಾಧಿಕಾರಿಗೆ ಜಿ.ಆರ್.ಷಡಾಕ್ಷರಪ್ಪ ಮನವಿ ಸಲ್ಲಿಸಿದರು. ಎಂ.ಅಣ್ಣಪ್ಪ, ಚಿತ್ರಪ್ಪ ಯರಬಾಳ ಇದ್ದರು.
Published on

ಶಿವಮೊಗ್ಗ: ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನೀಡುವಂತೆಯೇ ಪಕ್ಷೇತರ ಅಭ್ಯರ್ಥಿಗಳಿಗೂ ಮತದಾರರ ಪಟ್ಟಿಯನ್ನು ಉಚಿತವಾಗಿ ಒದಗಿಸುವಂತೆ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಆರ್.ಷಡಾಕ್ಷರಪ್ಪ ಮುಖ್ಯ ಚುನಾವಣಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ಬುಧವಾರ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಮೂಲಕ ಮೂಲಕ ಮನವಿ ಸಲ್ಲಿಸಿದ ಅವರು, ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದವರಿಗೆ ಮತದಾರರ ಪಟ್ಟಿ ಪ್ರತಿಗಳನ್ನು ಒದಗಿಸುತ್ತಿಲ್ಲ. ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷದ ಅಭ್ಯರ್ಥಿಗಳಂತೆಯೇ ಪಕ್ಷೇತರ ಅಭ್ಯರ್ಥಿಗಳೂ ನಿಗಧಿತ ಠೇವಣಿ ಸಲ್ಲಿಸಿ ಸ್ಪರ್ಧೆ ಮಾಡಿರುತ್ತಾರೆ. ಆದರೆ ಚುನಾವಣಾ ಆಯೋಗ ಅಭ್ಯರ್ಥಿಗಳಿಗೆ ಈ ರೀತಿ ತಾರತಮ್ಯ ಮಾಡುವುದು ಸರಿಯಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮತದಾರರ ಪಟ್ಟಿ ಇಲ್ಲದೇ ಮತದಾರರನ್ನು ಅಭ್ಯರ್ಥಿಗಳು ಸಕಾಲದಲ್ಲಿ ಸಂಪರ್ಕಿಸುವುದು ಕಷ್ಟ ಸಾಧ್ಯವಾಗುತ್ತದೆ. ಆದ್ದರಿಂದ ಮುಖ್ಯ ಚುನಾವಣಾಧಿಕಾರಿಗಳು ಕೂಡಲೇ ವಿಧಾನ ಪರಿಷತ್‌ನ ಎಲ್ಲ ಪಕ್ಷೇತರ ಅಭ್ಯರ್ಥಿಗಳಿಗೂ ತ್ವರಿತವಾಗಿ ಭಾವಚಿತ್ರ ಸಹಿತ ಮತದಾರರ ಪಟ್ಟಿಯನ್ನು ಉಚಿತವಾಗಿ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಪ್ರಮುಖವಾದ ಚಿತ್ರಪ್ಪ ಯರಬಾಳ, ಎಂ. ಅಣ್ಣಪ್ಪ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net