ಪ್ರಧಾನಿ ವಿರುದ್ಧ ಪ್ರಚೋದನಕಾರಿ ಹೇಳಿಕೆ

prajavani_2024-09-18_1pz8prml_deccanherald_import_sites_dh_files_article_images_2019_10_12_Arrest-1570847915.jpeg
Published on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾಕಾರಿ ವಿಡಿಯೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದ ಆರೋಪಿಯನ್ನು ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಮಂಗಮ್ಮನಪಾಳ್ಯ ನಿವಾಸಿ ನವಾಜ್ ಬಂಧಿತ. ಈತ ಎಲೆಕ್ಟ್ರಿಷಿಯನ್ ಆಗಿದ್ದು, ಇತ್ತೀಚೆಗೆ ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ.

ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು ಎಂದು ಪ್ರಚೋದನಕಾರಿ ವಿಡಿಯೋ ಮಾಡಿದ್ದ. ಅದನ್ನು ಇನ್‌ಸ್ಟಾ ಗ್ರಾಮ್‌ನ ಪಬ್ಲಿಕ್ ಸರ್ವೆಂಟ್ ಐಡಿಯಲ್ಲಿ ನವಾಜ್ ವಿಡಿಯೋ ಅಪ್‌ಲೋಡ್ ಮಾಡಿ ವೈರಲ್ ಮಾಡಿದ್ದ. ಇದನ್ನು ಗಮನಿಸಿದ ಬಂಡೆಪಾಳ್ಯ ಪೊಲೀಸರು ಎಚ್ಚೆತ್ತು ತಕ್ಷಣ ಪ್ರಕರಣ ದಾಖಲಿಸಿಕೊಂಡು ಆರೋಪಿ ನವಾಜ್‌ನ್ನು ಪತ್ತೆಹಚ್ಚಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net