ಪಿಎಸ್​ಐ ನೇಮಕಾತಿ ಹಗರಣ: ಮೊದಲ ಮಹಿಳಾ ಆರೋಪಿ ಬಂಧನ

PSI
Published on

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಗರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಮಹಿಳಾ ಆರೋಪಿಯನ್ನು ಬಂಧಿಸಲಾಗಿದೆ.

ಜ್ಯೋತಿ ಪಾಟೀಲ್ ಬಂಧಿತ ಮಹಿಳೆಯಾಗಿದ್ದು, ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಮಹಿಳಾ ಅಭ್ಯರ್ಥಿಗೆ ಡೀಲ್ ಕುದರಿಸಿದ್ದ ಆರೋಪ ಈಕೆ ಮೇಲಿದೆ. ಮಹಿಳಾ ಅಭ್ಯರ್ಥಿ ಶಾಂತಿಬಾಯಿಗೆ ಕಿಂಗ್‌ ಪಿನ್ ಪರಿಚಯ ಮಾಡಿಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಜ್ಯೋತಿ ಪಾಟೀಲ್ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಳು. ಕಳೆದ ಕೆಲ ತಿಂಗಳ ಹಿಂದೆ ಕಲಬುರಗಿ ಜಿಲ್ಲೆಯ ಶಹಬಾದ್ ನಗರ ಸಭೆಗೆ ವರ್ಗಾವಣೆಯಾಗಿತ್ತು ಎಂದು ತಿಳಿದುಬಂದಿದೆ.

ಪ್ರಸ್ತುತ ನೇಮಕಾತಿ ಅಕ್ರಮ ಪ್ರಕರಣದಲ್ಲಿ 17 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಸದ್ಯ ಪ್ರಮುಖ ಆರೋಪಿ ಮತ್ತೋರ್ವ ಮಹಿಳೆ ದಿವ್ಯ ಹಾಗರಗಿಗಾಗಿ ತೀವ್ರ ಶೋಧ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net