ಪಿಯುಸಿ ಪರೀಕ್ಷೆಯಲ್ಲಿ ಬಿಡದಿಯ ಪಿಯು ಕಾಲೇಜು ಸಾಧನೆ

Published on

ಬೆಂಗಳೂರು:
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಿಡದಿಯ ಶ್ರೀ ಎಚ್.ಎನ್. ಅನಂತಕುಮಾರ್ ಪಿಯು ಕಾಲೇಜು ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿದೆ.
ಕಾಲೇಜಿನ ಒಟ್ಟು 126 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಲ್ಲಿ 124 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಎಲ್ಲಾ 53 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ದೊರೆತಿದೆ. ವಾಣಿಜ್ಯ ವಿಭಾಗದ 73 ವಿದ್ಯಾರ್ಥಿಗಳಲ್ಲಿ 72 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.99 ಫಲಿತಾಂಶ ಬಂದಿದೆ.
ವಿಜ್ಞಾನ ವಿಭಾಗದ 26 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 34 ವಿದ್ಯಾರ್ಥಿಗಳು ಪ್ರಥಮ ದರ್ಜೆ, ವಾಣಿಜ್ಯ ವಿಭಾಗದಲ್ಲಿ 27 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 46 ವಿದ್ಯಾರ್ಥಿಗಳು ಪ್ರಥಮದರ್ಜೆ ಪಡೆದಿದ್ದಾರೆ.
ವಿಜ್ಞಾನ ವಿಭಾಗದ ನಂದಿನಿ 600 ಕ್ಕೆ 590 ಅಂಕಗಳನ್ನು ಗಳಿಸಿ ಸಂಸ್ಥೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ರೋಹಿಣಿ 586, ಚೈತ್ರಾ 585 ಅಂಕಗಳನ್ನು ಗಳಿಸಿದ್ದಾರೆ. ವಾಣಿಜ್ಯ ವಿಭಾಗದ ಬೃಂದಾ 600 ಕ್ಕೆ 577, ಅಯೇಷಾ ಬಾನು 573, ನಂದಿತಾ ಎಂ. ಆರ್. 571 ಅಂಕಗಳನ್ನು ಗಳಿಸಿ ಸಂಸ್ಥೆಗೆ ಹಿರಿಮೆ ತಂದುಕೊಟ್ಟಿದ್ದಾರೆ.
7 ವಿಜ್ಞಾನ ವಿದ್ಯಾರ್ಥಿಗಳು ಹಾಗೂ 5 ವಾಣಿಜ್ಯ ವಿದ್ಯಾರ್ಥಿಗಳು ಶೇ. 95 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ್ದಾರೆ. ರಸಾಯನ ಶಾಸ್ತ್ರ ವಿಷಯದಲ್ಲಿ ಚೈತ್ರಾ, ಇಂಚರಾ ಆರ್. ಸೌಮ್ಯಾ. ಕಿಶೋರ್ ಆರ್. ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ. ಜೀವಶಾಸ್ತ್ರ ವಿಷಯದಲ್ಲಿ ಇಂಚರಾ ಆರ್.ಕಿಶೋರ್ ಆರ್., ರೋಹಿಣಿ ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ. ಗಣಿತ ವಿಷಯದಲ್ಲಿ ನಂದಿನಿ ಎನ್. ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಗಗನ್ ಮತ್ತು ಪ್ರೀತಿ ಬಿ. ಕನ್ನಡದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net