5,8,9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ: ವೇಳಾಪಟ್ಟಿ ಪ್ರಕಟಿಸಿದ ಪರೀಕ್ಷಾ ಮಂಡಳಿ

CET-rank
Published on

ಬೆಂಗಳೂರು 2023-24ನೇ ಸಾಲಿನ 5,8 ಮತ್ತಿ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲಾತ್ಮಕ ಮೌಲ್ಯಂಕನ (ಎಸ್‌ಎ-2)ದ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಂಕನ ಮತ್ತು ಅಂಗೀಕರಣ ಪರಿಷತ್ತು ಪ್ರಕಟಿಸಿದೆ. ಮಾ.11ರಿಂದ 18ರ ವರೆಗೆ ಪರೀಕ್ಷೆಗಳು ನಡೆಯಲಿವೆ.

5ನೇ ತರಗತಿಗೆ ಮಾ.11ರಿಂದ 14ರವರೆಗೆ ಪರೀಕ್ಷೆ ನಡೆಯಲಿದೆ. ಮಾ.11- ಪ್ರಥಮ ಭಾಷೆ ಕನ್ನಡ, ಮಾ.12 ದ್ವಿತೀಯ ಭಾಷೆ ಇಂಗ್ಲಿಷ್, ಮಾ.13 ಪರಿಷರ ಅಧ್ಯಯನ ಮತ್ತು ಮಾ.14ರಂದು ಗಣಿತ ಪರೀಕ್ಷೆ ನಡೆಯಲಿದೆ. ಎಲ್ಲ ಪರೀಕ್ಷೆಗಳು ಮಧ್ಯಾಹ್ನ 2.30ರಿಂದ 4.30ರ ವರೆಗೆ ನಡೆಯಲಿವೆ.

8 ಮತ್ತು 9ನೇ ತರಗತಿ:

ಮಾ.11 ಪ್ರಥಮ ಭಾಷೆ ಕನ್ನಡ, ಮಾ.12 ದ್ವಿತೀಯ ಭಾಷೆ ಇಂಗ್ಲಿಷ್, ಮಾ.13 ತೃತೀಯ ಭಾಷೆ ಹಿಂದಿ, ಮಾ.14 ಗಣಿತ, ಮಾ.15 ವಿಜ್ಞಾನ, ಮಾ.16 ಸಮಾಜ ವಿಜ್ಞಾನ ಮತ್ತು ಮಾ.18ರಂದು ದೈಹಿಕ ಶಿಕ್ಷಣ ಪರೀಕ್ಷೆಗಳು ನಡೆಯಲಿವೆ. ಮಧ್ಯಾಹ್ನ 2.30ರಿಂದ ಸಂಜೆ 5 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಮಂಡಳಿ ಪ್ರಕಟಣೆ ಹೊರಡಿಸಿದೆ.

ಎಲ್ಲ ವಿದ್ಯಾರ್ಥಿಗಳಿಗೆ ಆಯಾ ಶಾಲಾ ಹಂತದಲ್ಲಿಯೇ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ತಾಲ್ಲೂಕು ಹಂತದಲ್ಲಿ ಮೌಲ್ಯಮಾಪನ ನಡೆಸಲಾಗುತ್ತದೆ. ಆದರೆ, ಮಂಡಳಿಯಿಂದಲೇ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಬಿಇಒ ಗಳಿಗೆ ಕಳುಹಿಸಲಾಗುತ್ತದೆ. ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮಗೆ ಅವಶ್ಯವಿರುವಷ್ಟು ಪ್ರಶ್ನೆಪತ್ರಿಕೆಗಳನ್ನು ಮುದ್ರಿಸಿಕೊಂಡು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ವಿತರಣೆ ಮಾಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net