ನುಡಿದಂತೆ ನಡೆದಿದೆ ನಮ್ಮ ಸರ್ಕಾರ

96e87b62-4802-4bb4-8eb6-82eb20b21642
Published on

ಕಪ್ಪಸೋಗೆ: ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಭರವಸೆ ನೀಡಿದರು.

ಕಪ್ಪಸೋಗೆ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ್ದ 5 ಗ್ಯಾರಂಟಿಗಳ ಪೈಕಿ ಈಗಾಗಲೇ 4 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಆ ಮೂಲಕ ನಮ್ಮ ಸರ್ಕಾರ ನುಡಿದಂತೆ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. ಸವಲತ್ತುಗಳನ್ನು ಜನರಿಗೆ ಸಮರ್ಪಕವಾಗಿ ತಲುಪಿಸಲು ಶ್ರಮಿಸುವುದಾಗಿ ಹೇಳಿದರು.

ಕಪ್ಪಸೋಗೆ ಗ್ರಾಮದಲ್ಲಿ ಸಿಸಿ ರಸ್ತೆ, ಸಮುದಾಯ ಭವನಗಳ ನಿರ್ಮಾಣ ಮತ್ತು ದುರಸ್ತಿ, ಶಾಲೆ ಮತ್ತು ಅಂಗನವಾಡಿ ಕಟ್ಟಡ ನಿರ್ಮಾಣ ಮತ್ತು ದುರಸ್ತಿ, ಮನೆಗಳ ನಿರ್ಮಾಣ ಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದು, ಎಲ್ಲ ಸಮಸ್ಯೆಗಳಿಗೂ ಸ್ಪಂದಿಸುವುದಾಗಿ ಭರವಸೆ ನೀಡಿದರು. ಯಾರಿಗೆ ಯಾವುದೇ ಸಮಸ್ಯೆಗಳು ಇದ್ದರೂ ನನ್ನನ್ನು ಖುದ್ದಾಗಿ ಭೇಟಿ ಮಾಡಿ ಹೇಳಿಕೊಂಡರೆ ಅವುಗಳನ್ನು ಬಗೆಹರಿಸಲು ಶ್ರಮಿಸುತ್ತೇನೆ. ಆದರೆ ಕ್ಷೇತ್ರದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕೋರಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ, ಎಪಿಎಂಸಿ ಮಾಜಿ ಅಧ್ಯಕ್ಷ ಮಾದಪ್ಪ, ಮಾರುತಿ, ದೊರೆಸ್ವಾಮಿ ನಾಯಕ, ಕಪ್ಪುಸೋಗೆ ಗೋವಿಂದ ನಾಯಕ, ವರದನಾಯಕ, ಮೂರ್ತಿ, ಚಂದ್ರವಾಡಿ ಜಯರಾಮ್ ಶೆಟ್ಟಿ, ಪ್ರಭು, ಕಡಬೂರ್ ನಂದೀಶ, ಟೈಲರ್ ನಾಗೇಶ್, ಜವರ ನಾಯಕ, ಮಾದಯ್ಯ, ಮಲ್ಲಿಕಾರ್ಜುನಪ್ಪ, ಸಿದ್ದನಾಯಕ, ಮಹದೇವ ನಾಯಕ, ಶ್ರೀನಿವಾಸ್, ಸಣ್ಣ ನಾಯಕ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net