ಸಾರ್ವಜನಿಕರು ಶಿಬಿರ ಸದುಪಯೋಗಪಡಿಸಿಕೊಳ್ಳಿರಿ

ಸಾರ್ವಜನಿಕರು ಶಿಬಿರ ಸದುಪಯೋಗಪಡಿಸಿಕೊಳ್ಳಿರಿ
Published on

ನಂಜನಗೂಡು: ನಗರದ ಗುರುಭವನದಲ್ಲಿ ಗೌತಮ ಬುದ್ಧ ಸಾಮಾಜಿಕ ಸೇವಾ ಟ್ರಸ್ಟ್, ಡಾ.ಎಪಿಜೆ ಅಬ್ದುಲ್ ಕಲಾಂ ಸೇವಾ ಟ್ರಸ್ಟ್ ಹಾಗೂ ನಾರಾಯಣ ಆಸ್ಪತ್ರೆ ಮೈಸೂರು ಇವರ ಸಹಯೋಗದಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಉದ್ಘಾಟಿಸಿದರು. ಸಾರ್ವಜನಿಕರು ಉಚಿತ ಶಿಬಿರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ತಹಸೀಲ್ದಾರ್ ಶಿವಕುಮಾರ್ ಕಾಸನೂರು, ಗೌತಮ ಬುದ್ದ ಸಾಮಾಜಿಕ ಸೇವಾ ಟ್ರಸ್ಟ್ ಅಧ್ಯಕ್ಷ ನಾಗಭೂಷಣ್, ಡಾ.ಎಪಿಜೆ ಅಬ್ದುಲ್ ಕಲಾಂ ಸೇವಾ ಟ್ರಸ್ಟ್ ಅಧ್ಯಕ್ಷ ಸೈಯದ್ ಹುಸೇನ್, ಡಾ.ಪೂಜಾ, ಡಾ.ವನಜಾ, ಪ್ರತಿಧ್ವನಿ ವೇದಿಕೆಯ ಅಧ್ಯಕ್ಷ ತ್ರಿನೇಶ್, ಜನಸಂಗ್ರಾಮ ಪರಿಷತ್ ರಾಜ್ಯಾಧ್ಯಕ್ಷ ವಿಜಯ್ ಕುಮಾರ್, ಸ್ಪರ್ಶ, ರಾಜೇಂದ್ರ, ಜಯರಾಂ, ಮಹೇಶ್, ವಿನಯ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net