ರಸ್ತೆ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಎಇಇ

14¸spt5
ಸೋಮವಾರಪೇಟೆ, ತೋಳೂರುಶೆಟ್ಟಳ್ಳಿ, ಕೂತಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಎಇಇ ವೆಂಕಟೇಶ್ ನಾಯಕ್ ಪರಿಶೀಲಿಸಿದರು. ಗ್ರಾಮಸ್ಥರು ಇದ್ದರು.
Published on

ಸೋಮವಾರಪೇಟೆ: ಮಾಗಡಿ-ಜಾಲ್ಸೂರು ರಾಜ್ಯ ಹೆದ್ದಾರಿಯ ಸೋಮವಾರಪೇಟೆಯ ಅಲೆಕಟ್ಟೆ-ತೋಳುರುಶೆಟ್ಟಳ್ಳಿ-ಕೂತಿ ಮಾರ್ಗ ರಸ್ತೆಯ 20 ಕೋಟಿ ರೂ. ವೆಚ್ಚದ ಕಾಮಗಾರಿ ವಿಸ್ತರಣೆ ಹಾಗೂ ಡಾಂಬರೀಕರಣ ಅಂದಾಜು ಪಟ್ಟಿಯಂತೆ ನಡೆಯುತ್ತಿಲ್ಲ ಎಂಬ ಗ್ರಾಮಸ್ಥರ ಆರೋಪದಡಿ ಲೋಕೋಪಯೋಗಿ ಇಲಾಖೆಯ ಎಇಇ ವೆಂಕಟೇಶ್ ನಾಯಕ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿದರು.

ತೋಳೂರು ಶೆಟ್ಟಳ್ಳಿಯಿಂದ ಹರಪಳ್ಳಿವರೆಗೆ 2.5 ಕಿ.ಮೀ.ವರೆಗೆ ಮಾತ್ರ ರಸ್ತೆಯ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯು ನಿಧಾನಗತಿಯಲ್ಲಿ ನಡೆಯುತ್ತಿದ್ದು, ಈಗ ಮಳೆಗಾಲ ಪ್ರಾರಂಭವಾಗುತ್ತಿದೆ. ಇದು ಗುತ್ತಿಗೆದಾರನ ನಿರ್ಲಕ್ಷ್ಯದಿಂದ ಸಮಸ್ಯೆಯಾಗಿದೆ ಎಂದು ಗ್ರಾಮಸ್ಥರು ದೂರಿದರು.

ಸಾಮಾಜಿಕ ಕಾರ್ಯಕರ್ತ ಬಗ್ಗನ ಅನಿಲ್, ಕೂತಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಜಯರಾಂ, ರೈತ ಹೋರಾಟ ಸಮಿತಿಯ ಅಧ್ಯಕ್ಷ ಕೆ.ಬಿ.ಸುರೇಶ್, ಮಲೆನಾಡು ರಕ್ಷಣಾ ಸೇನೆಯ ತಾಲೂಕು ಅಧ್ಯಕ್ಷ ಪೃಥ್ವಿ ಗೌಡಳ್ಳಿ, ಕಾಫಿ ಬೆಳಗಾರರ ಸಂಘದ ಅಧ್ಯಕ್ಷ ಬಿ.ಎಂ.ಲವ, ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯ ಕಾರ್ಯದರ್ಶಿ ಆದರ್ಶ್, ಗ್ರಾಮಸ್ಥರಾದ ಜೀವನ್, ಕೆ.ಸಿ.ಉದಯ್‌ಕುಮಾರ್, ಎಚ್.ಡಿ. ಮೋಹನ್, ದಿವಾಕರ್, ದೇವರಾಜ್, ಕಿರಿಯ ಇಂಜಿನಿಯರ್ ಅಭ್ರಸ್, ಸಿವಿಲ್ ಎಕ್ಸ್‌ಪರ್ಟ್ ಟೆಸ್ಟಿಂಗ್ ಸೆಂಟರ್‌ನ ತಿಲಕ್ ಇದ್ದರು.

ಗ್ರಾಮಸ್ಥರ ಆರೋಪದ ಬಗ್ಗೆ ಪರಿಶೀಲನೆ ಮಾಡಿ ಮೇಲಧಿಕಾರಿಗಳಿಗೆ ವರದಿ ನೀಡಲಾಗುವುದು. ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿದಾರರಿಗೆ ಸೂಚಿಸಲಾಗುವುದು ಎಂದು ಎಇಇ ಗಾಮಸ್ಥರಿಗೆ ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net