ಡೆಂಘೆ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ: ಬಿ.ಎನ್.ಗಿರೀಶ್

tahashildhar b.n.girish
ತಹಸೀಲ್ದಾರ್ ಬಿ.ಎನ್.ಗಿರೀಶ್
Published on

ಶಿವಮೊಗ್ಗ: ಡೆಂಘೆ ನಿಯಂತ್ರಣದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ತಹಸೀಲ್ದಾರ್ ಬಿ.ಎನ್.ಗಿರೀಶ್ ಮನವಿ ಮಾಡಿದರು.

ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಹಾಗೂ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ನಡೆಸಿದ ಅವರು, ಪ್ರತಿ ಶುಕ್ರವಾರ ಎಲ್ಲರೂ ಮನೆ, ಕಚೇರಿ, ಶಾಲೆಯಲ್ಲಿನ ನೀರು ಸಂಗ್ರಹಿಸುವ ಬಕೆಟ್, ಬ್ಯಾರೆಲ್, ಪಾತ್ರೆಗಳನ್ನು ಖಾಲಿ ಮಾಡಿ, ಸ್ವಚ್ಛಗೊಳಿಸಿ ಒಣಗಿಸಿ ಪುನಃ ನೀರು ತುಂಬಿಡಬೇಕು. ಡೆಂಘೆ ಬರುವ ಮುನ್ನವೇ ಮುಂಜಾಗೃತಿ ಮತ್ತು ಎಚ್ಚರಿಕೆ ವಹಿಸಬೇಕು ಎಂದರು.
ಆಶಾ, ಅಂಗನವಾಡಿ ಮತ್ತು ಆರೋಗ್ಯ ಕಾರ್ಯಕರ್ತೆಯರು ಮನೆ ಮನೆಗೆ ಲಾರ್ವಾ ಸಮೀಕ್ಷೆಗೆ ಬರುವರು. ಮನೆಗಳಲ್ಲಿರುವ ಫ್ರಿಡ್ಜ್‌ನಲ್ಲಿ ಸಹ ಲಾರ್ವಾ ಉತ್ಪತ್ತಿಯಾಗುವ ಸಂಭವ ಇದೆ. ಕಾರ್ಯಕರ್ತೆಯರು ಫ್ರಿಡ್ಜ್ ಪರಿಶೀಲಿಸುವರು. ಅದಕ್ಕೆ ಸಾರ್ವಜನಿಕರು ಸಹಕರಿಸಬೇಕು. ನೀರಿನ ಅವಶ್ಯಕ ಶೇಖರಣೆಗೆ ಮೀನುಗಾರಿಕೆ ಇಲಾಖೆಯಿಂದ ಲಾರ್ವಾ ತಿನ್ನುವ ಗಪ್ಪಿ ಮೀನುಗಳನ್ನು ತಂದು ಬಿಡಬಹುದು ಎಂದು ಸಲಹೆ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಚಂದ್ರಶೇಖರ್ ಮಾತನಾಡಿ, ತಾಲೂಕಿನಲ್ಲಿ ಜನವರಿಯಿಂದ ಜೂನ್‌ವರೆಗೆ ಒಟ್ಟು 94 ಡೆಂಘೆ ಮತ್ತು 24 ಚಿಕೂನ್‌ಗುನ್ಯಾ ಪ್ರಕರಣ ದಾಖಲಾಗಿವೆ. ನಿಂತ ನೀರಿಗೆ ರಾಸಾಯನಿಕ ಹಾಗೂ ಫಾಗಿಂಗ್ ಮಾಡಲಾಗುತ್ತಿದೆ ಎಂದರು. ರಮೇಶ್, ಹೇಮಂತ್‌ರಾಜ್ ಅರಸ್, ರವಿರಾಜ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net