ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ದಿನಾಂಕ ಬದಲು; ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

PUC exam practical
Published on

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪರಿಷ್ಕರಣೆಗೊಂಡಿದೆ. ಈ ಮೊದಲು ಏಪ್ರಿಲ್ 16ರಿಂದ ಮೇ 6ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆಇಇ ನೀಟ್ ಪರೀಕ್ಷೆಯ ಮೊದಲ ಹಂತದ ಪರೀಕ್ಷೆ ಮತ್ತು ಪಿಯು ಪರೀಕ್ಷೆ ದಿನಾಂಕ ಒಂದೇ ಆಗಿದ್ದರಿಂದ ವೇಳಾಪಟ್ಟಿ ಬದಲು ಮಾಡಿದೆ.

ಜೆಇಇ ಪರೀಕ್ಷೆಯು ಏ.16ರಿಂದ 21ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಆ ಪ್ರಕಾರವಾಗಿ ಏ.22ರಿಂದ ಮೇ 11ರವರೆಗೆ ನಡೆಸಲು ನಿರ್ಧರಿಸಿದೆ. ಈ ವೇಳಾಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.

ವಿದ್ಯಾರ್ಥಿಗಳು, ಪಾಲಕರು ಆಕ್ಷೇಪಣೆಗಳಿದ್ದಲ್ಲಿ ಮಾ.5ರೊಳಗೆ jdexam.dpue@gmail.com ಈ ವಿಳಾಸಕ್ಕೆ ಕಳುಹಿಸುವಂತೆ ಕೋರಿದೆ. ಅಂಚೆ ಮೂಲಕ ನಿಗದಿ ಪಡಿಸಿರುವ ದಿನಾಂಕದ ನಂತರ ಬರುವಂತಹ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹೆಚ್ಚಿನ ಮಾಹಿತಿಗೆ https://pue.kar.nic.in/ ನೋಡಬಹುದು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net