

ಬೆಂಗಳೂರು: ರಾಜ್ಯಾದ್ಯಂತ ಗುರುವಾರ ನಡೆದ ದ್ವಿತೀಯ ಪಿಯು ತರ್ಕಶಾಸ ಮತ್ತು ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆಗೆ ಶೇ.96.46 ವಿದ್ಯಾರ್ಥಿಗಳು ಹಾಜರಾಗಿದ್ದಾರೆ.
ಪರೀಕ್ಷೆಗೆ 2.36 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 2.27 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 8,350 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲವೆಂದು ಪರೀಕ್ಷೆ ನಡೆಸಿದ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ, ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.