ಬಿವೈಆರ್‌ಗೆ ಸಚಿವ ಸ್ಥಾನ ಸಿಗಲೆಂದು ಪೂಜೆ

sor pooje
ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಸೊರಬ ತಾಲೂಕು ಯುವ ಮೋರ್ಚಾ ಪದಾಧಿಕಾರಿಗಳು ಚಂದ್ರಗುತ್ತಿ ರೇಣುಕಾಂಬಾ ದೇವಿಗೆ ಪೂಜೆ ಸಲ್ಲಿಸಿದರು. ರಾಜು, ಜೆ.ಎಸ್.ಚಿದಾನಂದ ಗೌಡ, ಗುರುಮೂರ್ತಿ, ಹರೀಶ್ ಇತರರಿದ್ದರು.
Published on

ಸೊರಬ: ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿ ಬಿಜೆಪಿ ತಾಲೂಕು ಯುವ ಮೋರ್ಚಾ ಪದಾಧಿಕಾರಿಗಳು ಚಂದ್ರಗುತ್ತಿ ಶ್ರೀ ರೇಣುಕಾಂಬಾ ದೇವಿಗೆ ಬುಧವಾರ ವಿಶೇಷ ಪೂಜೆ ಸಲ್ಲಿಸಿದರು.

ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ ಮಾತನಾಡಿ, ಬಿ.ವೈ.ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನತೆ ಬೆಂಬಲ ಸೂಚಿಸಿ ಸಂಸದರನ್ನಾಗಿ ಆಯ್ಕೆ ಮಾಡಿದ್ದಾರೆ. ಈ ಹಿಂದೆಯೂ ಚುನಾವಣೆ ಪೂರ್ವದಲ್ಲಿ ರಾಘವೇಂದ್ರ ಅವರು ಶ್ರೀ ರೇಣುಕಾಂಬೆ ದರ್ಶನಾಶೀರ್ವಾದ ಪಡೆದಿದ್ದರು ಎಂದರು.
ಜಿಲ್ಲಾ ಕಾರ್ಯದರ್ಶಿ ಆಶೀಕ್ ನಾಗಪ್ಪ ಮಾತನಾಡಿ, ಬಿ.ವೈ.ರಾಘವೇಂದ್ರ ಅವರಿಗೆ ಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವು ಲಭಿಸಿದೆ. ಜಿಲ್ಲೆಯ ಅಭಿವೃದ್ಧಿ ಶಕೆಗೆ ಮುನ್ನುಡಿ ಬರೆದು ಸತತ ನಾಲ್ಕನೇ ಬಾರಿ ಜಯ ಸಾಧಿಸಿರುವ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ರೈಲ್ವೆ ಅಥವಾ ವಿಮಾನಯಾನ ಖಾತೆ ಲಭಿಸಲಿ. ಈ ಮೂಲಕ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.
ತಾಲೂಕು ಗೋ ಸಂರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್.ಚಿದಾನಂದ ಗೌಡ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ವಿಶೇಷ ಆಹ್ವಾನಿತ ಗುರುಮೂರ್ತಿ, ತಾಲೂಕು ಪ್ರಧಾನ ಕಾರ್ಯದರ್ಶಿ ಹರೀಶ್, ಚಂದ್ರಗುತ್ತಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಶೇಟ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net