ಪಲ್ಸ್ ಪೋಲಿಯೋ ಮಕ್ಕಳಿಗೆ ಜೀವಾಮೃತ

biriur polio
ಬೀರೂರು ಸಮೀಪದ ಹುಲ್ಲೇಹಳ್ಳಿ ಗ್ರಾಪಂಯಲ್ಲಿ ಎಂ.ಲಕ್ಷ್ಮಣಪ್ಪ ಪೋಲಿಯೋ ಹನಿಯನ್ನು ಮಗುವಿಗೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಂಬಿಕಾ, ಸುಮಾ, ಮೀನಾಕ್ಷಿ ಇದ್ದರು.
Published on

ಬೀರೂರು: ಮಕ್ಕಳು ಆರೋಗ್ಯವಂತರಾಗಿ ಬದುಕಲು ಪೋಲಿಯೋ ಲಿಸಿಕೆ ಜೀವಾಮೃತವಾಗಲಿದೆ ಎಂದು ಹುಲ್ಲೇಹಳ್ಳಿ ಗ್ರಾಪಂ ಉಪಾಧ್ಯಕ್ಷ ಎಂ.ಲಕ್ಷ್ಮಣಪ್ಪ ತಿಳಿಸಿದರು.
ಸಮೀಪದ ಹುಲ್ಲೇಹಳ್ಳಿ ಗ್ರಾಪಂಯಲ್ಲಿ ಭಾನುವಾರ ಆಯೋಜಿಸಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ಭಾರತ ಪೋಲಿಯೋ ಮುಕ್ತವಾಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಈ ಅಭಿಯಾನವನ್ನು ಮುಂದುವರಿಸಲಾಗುತ್ತಿದೆ. 0-5 ವರ್ಷದ ಮಕ್ಕಳು ಆರೋಗ್ಯವಂತರಾಗಿ ಬೆಳೆಯುವಲ್ಲಿ ಪ್ರಾಥಮಿಕವಾಗಿ ಲಭ್ಯವಾಗುವ ಎಲ್ಲ ಬಗೆಯ ಲಸಿಕೆಗಳನ್ನು ಕಡ್ಡಾಯವಾಗಿ ಹಾಕಿಸುವಲ್ಲಿ ಪಾಲಕರು ಕ್ರಮ ವಹಿಸಬೇಕು. ಇಲ್ಲವಾದಲ್ಲಿ ನಿಮ್ಮ ಮಕ್ಕಳ ಅನಾರೋಗ್ಯಕ್ಕೆ ನೀವೆ ಕಾರಣರಾಗುವಿರಿ ಎಂದರು. ಕಾರ್ಯಕ್ರಮದಲ್ಲಿ ಅಂಬಿಕಾ, ಸುಮಾ, ಮೀನಾಕ್ಷಿ ಹಾಗೂ ಆಶಾ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net