ಮದ್ಯ ಸೇವಿಸಿಕೊಂಡು ಪುಂಡಾಟ

Ksd_Bike theft
Published on

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ ಮದ್ಯ ಸೇವಿಸಿಕೊಂಡು ಪುಂಡಾಟ ಮೆರೆದಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಎಂ.ಜಿ. ರಸ್ತೆ ಬಳಿ ಒಂದೇ ದ್ವಿಚಕ್ರ ವಾಹನದಲ್ಲಿ ಯುವಕರು ಕುಳಿತು ಅಡ್ಡಾದಿಡ್ಡಿ ಚಲಾಯಿಸಿಕೊಂಡು ಕೈಯಲ್ಲಿ ಮದ್ಯದ ಬಾಟಲಿ ಮತ್ತು ಲೋಟ ಹಿಡಿದುಕೊಂಡು ಮದ್ಯ ಸೇವಿಸುತ್ತಾ ಸುತ್ತಾಡಿದ್ದಾರೆ.

ಕಾರೊಂದರ ಪ್ರಯಾಣಿಕ ಮೊಬೈಲ್‌ನಲ್ಲಿ ಯುವಕರ ಪುಂಡಾಟವನ್ನು ಸೆರೆ ಹಿಡಿದು ಜಾಲತಾಣದಲ್ಲಿ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ. ಈ ದೂರನ್ನು ಕಬ್ಬನ್ ಪಾರ್ಕ್ ಠಾಣೆಗೆ ವರ್ಗಾಯಿಸಲಾಗಿದೆ. ಈ ಸಂಬಂಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಡಿಯೋದಲ್ಲಿರುವ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಆಧರಿಸಿ ಪುಂಡರ ಪತ್ತೆಗೆ ಬಲೆಬೀಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net