

ಪುಣೆ: ಪುಣೆಯ ಮಂಡೈ ಮೆಟ್ರೋ (Metro Station ) ನಿಲ್ದಾಣದಲ್ಲಿ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಪ್ರಣಾಪಾಯವಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಹಾತ್ಮ ಫುಲೆ ಮಂಡೈ ಪ್ರದೇಶದ ಮೆಟ್ರೋ ನಿಲ್ದಾಣದ ನೆಲ ಮಹಡಿಯಲ್ಲಿ ಭಾನುವಾರ ಮಧ್ಯರಾತ್ರಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅಗ್ನಿಶಾಮಕ ದಳದವರು ಬೆಂಕಿಯನ್ನು ಹತೋಟಿಗೆ ತರುವ ಪ್ರಯತ್ನ ಆರಂಭಿಸಿದ್ದಾರೆ.
ಸ್ಥಳೀಯ ಸಂಸದ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಮತ್ತು ಸಹಕಾರ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಬೆಂಕಿಯನ್ನು ನಂದಿಸಲಾಗಿದೆ ಮತ್ತು ಘಟನೆಯು ಮೆಟ್ರೋ ಸೇವೆಯ ಮೇಲೆ ಪರಿಣಾಮ ಬೀರಲಿಲ್ಲ ಎಂದು ಹೇಳಿದರು.