ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ರಕ್ತದ ಮಾದರಿ ಬದಲಾಯಿಸಲು ಪಡೆದಿದ್ದು 3 ಲಕ್ಷ ರೂ.!

WhatsApp Image 2024-05-28 at 9.46.27 AM
Published on

ಪುಣೆ: ಕಳೆದ ಒಂದು ವಾರದ ಹಿಂದೆ ಪುಣೆಯಲ್ಲಿ ನಡೆದ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ ಬೈಕ್​ನಲ್ಲಿದ್ದ ಸಾಫ್ಟ್​ವೇರ್ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ್ದಲ್ಲದೇ, ಇಬ್ಬರ ಜೀವ ಬಲಿಪಡೆದ ಅಪ್ರಾಪ್ತ ಬಾಲಕನನ್ನು ಸಾರ್ವಜನಿಕರ ಆಕ್ರೋಶದ ಮೇರೆಗೆ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದರು. ಇದಾದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಈ ವೇಳೆ ಬಾಲಕನನ್ನು ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಿದಾಗ​ ಒಂದೊಂದೇ ಬೆಚ್ಚಿಬೀಳಿಸುವ ಸಂಗತಿಗಳು ಬೆಳಕಿಗೆ ಬಂದಿವೆ. ಇದೀಗ ಅಧಿಕಾರಿಗಳು ಮತ್ತೊಂದು ಅನಿರೀಕ್ಷಿತ ಟ್ವಿಸ್ಟ್ ಅನ್ನು ಕಂಡುಹಿಡಿದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಅಪ್ರಾಪ್ತ ಬಾಲಕನ ರಕ್ತದ ಮಾದರಿ ಪರೀಕ್ಷೆಯ ವರದಿಯನ್ನು ಇಬ್ಬರು ವೈದ್ಯರು ಬದಲಾಯಿಸಿರುವುದು ಪತ್ತೆಯಾಗಿದೆ. ಈ ಸಂಬಂಧ ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಇದೀಗ ಬಂದಿರುವ ಮಾಹಿತಿ ಪ್ರಕಾರ, ಬಂಧಿತರಾದ ಇಬ್ಬರು ವೈದ್ಯರು ಆಸ್ಪತ್ರೆಯ ಸಿಬ್ಬಂದಿಗೆ ಬಾಲಕನ ಅಸಲಿ ರಕ್ತದ ಮಾದರಿಯನ್ನು ಬದಲಾಯಿಸಲು ಬರೋಬ್ಬರಿ ಮೂರು ಲಕ್ಷ ರೂ. ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಈ ಸ್ಫೋಟಕ ವಿಷಯ ಹೊರಬೀಳುತ್ತಿದ್ದಂತೆ ಪುಣೆ ಕ್ರೈಂ ಬ್ರಾಂಚ್ ಅಧಿಕಾರಿಗಳು ಆರೋಪಿಗಳೀಂದ ನಗದನ್ನು ವಶಪಡಿಸಿಕೊಂಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net