ಪುನೀತ್ ರಾಜ್​ಕುಮಾರ್​ಗೆ ಕರ್ನಾಟಕ ರತ್ನ; ನ.1ರಂದು ಪ್ರದಾನ

1372694
Published on

ಬೆಂಗಳೂರು: ಕನ್ನಡ ರಾಜ್ಯೋತ್ಸವ (ನ.1) ದಿನದಂದು ದಿ. ನಟ ಪುನೀತ್ ರಾಜ್​ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗೃಹ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಪ್ರಧಾನ ಮಾಡುವ ನಿರ್ಣಯವನ್ನು ತೆಗೆದುಕೊಂಡಿದ್ದಾರೆ. ಈ ಸಂದರ್ಭದಲ್ಲಿ ನಟ ರಾಘವೇಂದ್ರ ರಾಜ್​ಕುಮಾರ್, ಅಶ್ವಿನಿ ಪುನೀತ್ ರಾಜ್​ಕುಮಾರ್, ಯುವ ರಾಜ್​ಕುಮಾರ್ ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನ ಸೌಧದ ಮುಂಭಾಗದಲ್ಲಿ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net