

ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ ಐದು ತಿಂಗಳು. ಈ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್‍ಕುಮಾರ್ 5ನೇ ತಿಂಗಳ ಪುಣ್ಯ ತಿಥಿ ಹಿನ್ನೆಲೆ, ಅಪ್ಪು ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿದರು.
ರಾಘವೇಂದ್ರ ರಾಜ್‍ಕುಮಾರ್, ಪುನೀತ್ ಪತ್ನಿ ಅಶ್ವಿನಿ ಹಾಗು ಮಕ್ಕಳು ಅಪ್ಪು ಸಮಾಧಿಗೆ ಭೇಟಿ ನೀಡಿ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಕುಟುಂಬಸ್ಥರು ಹೊರಡುವ ವೇಳೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಭೇಟಿ ನೀಡಿದರು. ಅಲ್ಲದೆ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು.