ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಶಿಕ್ಷೆಯಾಗಲಿ

nsui
ಗಾಂಧಿ ಪ್ರತಿಮೆ ಭಗ್ನಗೊಳಿಸಿದವರ ಬಂಧನಕ್ಕೆ ಒತ್ತಾಯಿಸಿ ಎನ್‌ಎಸ್‌ಯುಐ ಪದಾಧಿಕಾರಿಗಳು ಎಸ್ಪಿ ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ರವಿ ಕಾಟಿಕೆರೆ, ವಿಜಯ್, ಚರಣ್ ಶೆಟ್ಟಿ, ಹರ್ಷಿತ್ ಗೌಡ, ನಿಕಲ್, ಕೀರ್ತಿ, ಅಶೋಕ ಇತರರಿದ್ದರು.
Published on

ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧಿ ಪ್ರತಿಮೆ ಭಗ್ನಗೊಳಿಸಿದವರನ್ನು ಪತ್ತೆ ಹಚ್ಚಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಎನ್‌ಎಸ್‌ಯುಐ ಗ್ರಾಮಾಂತರ ಘಟಕದ ಪದಾಧಿಕಾರಿಗಳು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಗಾಂಧೀಜಿ ವಿಶ್ವಶಾಂತಿ ಬಯಸಿದವರು. ಶಾಂತಿಯುತ ಹೋರಾಟ ನಡೆಸಿ ದೇಶಕ್ಕೆ ಸ್ವಾತಂತ್ರೃ ದೊರಕಿಸಿಕೊಟ್ಟರು. ಸ್ವಾತಂತ್ರೃ ಹೋರಾಟದ ಬಗ್ಗೆ ಸರಿಯಾಗಿ ಅರ್ಥ ಮಾಡಿಕೊಳ್ಳದ, ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲದ ಕಿಡಿಗೇಡಿಗಳು ನಡುರಾತ್ರಿಯಲ್ಲಿ ಪ್ರತಿಮೆ ಭಗ್ನಗೊಳಿಸಿ ವಿಕೃತಿ ಮೆರೆದಿರುವುದು ದುರದೃಷ್ಟಕರ. ಸಮಾಜದಲ್ಲಿ ಶಾಂತಿ ಕದಡುವ ವಿಧ್ವಂಸಕ ಶಕ್ತಿಗಳಿಂದ ಮಾತ್ರ ಇಂತಹ ಹೀನಕೃತ್ಯ ನಡೆಸಲು ಸಾಧ್ಯ. ಪೊಲೀಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿದರು.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಶಿವಮೊಗ್ಗ ಗ್ರಾಮಾಂತರ ಘಟಕದ ಅಧ್ಯಕ್ಷ ಹರ್ಷಿತ್ ಗೌಡ, ನಗರಾಧ್ಯಕ್ಷ ಚರಣ್ ಎ. ಶೆಟ್ಟಿ, ಪ್ರಮುಖರಾದ ಧನರಾಜ್, ಚಂದ್ರೋಜಿ ರಾವ್, ಪ್ರದೀಪ, ಅಶೋಕ, ಕೀರ್ತಿ, ಸಾಗರ್, ಸುಜನ್, ನಿಖಿಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net