

ಜೈಪುರ: ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ನೀಡಿದ ಹೇಳಿಕೆಯ ನಂತರ ರಾಜಸ್ಥಾನ ಕಾಂಗ್ರೆಸ್ ಸರ್ಕಾರವು ತನ್ನ ಕ್ಯಾಬಿನೆಟ್‌ನಿಂದ ಸಚಿವ ರಾಜೇಂದ್ರ ಸಿಂಗ್ ಗುಧಾರನ್ನು ವಜಾ ಮಾಡಿದೆ.
ಇದನ್ನೂ ಓದಿ: VIDEO | ಮರದ ಎಲೆಗಳನ್ನು ತಿಂದ ಸಿಂಹ, ದೃಶ್ಯ ನೋಡಿ ಹುಬ್ಬೇರಿಸಿದ ನೆಟ್ಟಿಗರು..!
ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ತಮ್ಮದೇ ಸರ್ಕಾರವನ್ನು ಟೀಕಿಸಿದ ಕೆಲವೇ ಗಂಟೆಗಳ ಈ ಬೆಳವಣಿಗೆ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಿಂಗ್, ನಾನು ಯಾವಾಗಲೂ ಸತ್ಯವನ್ನು ಮಾತನಾಡುತ್ತೇನೆ, ನಾನು ನನ್ನ ಆತ್ಮಸಾಕ್ಷಿಯನ್ನು ಅನುಸರಿಸುತ್ತೇನೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ನನಗೆ ಶಿಕ್ಷೆಯಾಗಿದೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಗೆಲ್ಲಲು ನನಗೆ ಉದಯಪುರವತಿ ವಿಧಾನಸಭಾ ಕ್ಷೇತ್ರದ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸಹಾಯ ಮಾಡಿದ್ದರು. ಆದರೆ ಇಂದು ನಮ್ಮ ಸಹೋದರಿಯರು ಮತ್ತು ತಾಯಂದಿರ ಮೇಲೆ ಲೈಂಗಿಕ ಕಿರುಕುಳದ ಘಟನೆಗಳು ಪತ್ರಿಕೆಗಳಲ್ಲಿ ತುಂಬಿ ತುಳುಕುತ್ತಿವೆ. ರಾಜಸ್ಥಾನವು ಮಹಿಳೆಯರ ಮೇಲಿನ ದೌರ್ಜನ್ಯಗಳಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಇದು ತೋರಿಸುತ್ತದೆ ಎಂದಿದ್ದರು.
ಇದನ್ನೂ ಓದಿ: ಜನರ ಬದುಕೇ ಹಾಲಾಹಲ, ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ
ಬಿಜೆಪಿ ಆಡಳಿತವಿರುವ ಮಣಿಪುರದಲ್ಲಿನ ಹಿಂಸಾಚಾರದ ವಿರುದ್ಧ ಕಾಂಗ್ರೆಸ್ ಪಕ್ಷವು ಸೇರಿದಂತೆ ಬೇರೆ ಪಕ್ಷಗಳು ಟೀಕಿಸುತ್ತಿವೆ. ಮತ್ತೊಂದೆಡೆ, ಮಹಿಳೆಯರ ವಿರುದ್ಧದ ಅಪರಾಧಗಳನ್ನು ನಿಯಂತ್ರಿಸುವಲ್ಲಿ ಮತ್ತು ಅವರಿಗೆ ಭದ್ರತೆ ಒದಗಿಸುವಲ್ಲಿ ನಾವು ವಿಫಲರಾಗಿದ್ದೇವೆ. ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಿವೆ. ಮಣಿಪುರದ ಸಮಸ್ಯೆಯನ್ನು ಎತ್ತುವ ಬದಲು ನಾವು ನಮ್ಮ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಆಡಳಿತ ಇದ್ದಾಗಲೂ ಆಗ ವಿರೋಧ ಪಕ್ಷದಲ್ಲಿದ್ದ ಕಾಂಗ್ರೆಸ್ ಮಕ್ಕಳ ಅಪಹರಣದ ವಿರುದ್ಧ ಧ್ವನಿ ಎತ್ತಿತ್ತು. ಅವರ ಸರ್ಕಾರದ ಆಡಳಿತದಲ್ಲಿ ಹೆಣ್ಣು ಮಕ್ಕಳ ಅಪಹರಣದ ವಿರುದ್ಧ ಪ್ರತಿಭಟನೆ ನಡೆಸಿದ್ದೇವೆ. ನಿರುದ್ಯೋಗ, ಭ್ರಷ್ಟಾಚಾರ ಮತ್ತು ಮಹಿಳೆಯರಿಗೆ ಏನಾದರೂ ಒಳ್ಳೆಯದನ್ನು ಮಾಡಬಹುದು ಎಂಬ ಭರವಸೆಯೊಂದಿಗೆ ಜನರು ನಮ್ಮನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್)