ಹಾಡಹಗಲೇ ಎಎಪಿ ನಾಯಕನನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು; ವಿಡಿಯೋ ವೈರಲ್

ShootOut
Published on

ಅಮೃತಸರ: ಆಘಾತಕಾರಿ ಘಟನೆ ಒಂದರಲ್ಲಿ ದುಷ್ಕರ್ಮಿಗಳ ಗುಂಪೊಂದು ಹಾಡಹಗಲೇ ಆಮ್​ ಆದ್ಮಿ ಪಕ್ಷದ ನಾಯಕನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್​ನ ತರ್ನ್ ತರಣ್ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಗುರುಪ್ರೀತ್ ಸಿಂಗ್ ಅಲಿಯಾಸ್ ಗೋಪಿ ಎಂದು ಗುರುತಿಸಲಾಗಿದ್ದು, ಪ್ರಕರಣ ಒಂದರ ಸಂಬಂಧ ಕಪುರ್ತಲಾಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಹತ್ಯೆಯ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆಡಳಿತರೂಢ ಎಎಪಿ ಪಕ್ಷವನ್ನು ಸಾರ್ವಜನಿಕರು ಹಾಗೂ ವಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಗುರುಪ್ರೀತ್​ ಸಿಂಗ್​ರನ್ನು ತುಂಬಾ ದೂರದಿದಂ ಫಾಲೋ ಮಾಡಿರುವ ಆರೋಪಿಗಳು ಫತೇಬಾದ್ ಮತ್ತು ಗೋಯಿಂಡ್ವಾಲ್ ಸಾಹಿಬ್ ನಡುವಿನ ರೈಲ್ವೇ ಕ್ರಾಸಿಂಗ್ ಬಳಿ ಕಾರು ಅಡ್ಡಗಟ್ಟಿ ಗುಂಡು ಚಲಾಯಿಸಿ ಪರಾರಿಯಾಗಿದ್ಧಾರೆ. ಫೆಬ್ರವರಿ 25 ರಂದು ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್‌ಗಢ ಭಾರತೀಯ ರಾಷ್ಟ್ರೀಯ ಲೋಕದಳ (INLD) ಮುಖ್ಯಸ್ಥ ನಫೆ ಸಿಂಗ್ ರಾಥೀ ಮೇಲಿನ ಗುಂಡಿನ ದಾಳಿ ಬಳಿಕ ಈ ಘಟನೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ. ಘಟನೆ ನಡೆದ ಪ್ರದೇಶದ ಸುತ್ತಮುತ್ತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾಗಳ ಪರಿಶೀಲನೆಯಲ್ಲಿ ಅಧಿಕಾರಿಗಳು ತೊಡಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net