

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿದ್ದ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಬ್ಯಾನ್ ಮಾಡುತ್ತೇವೆ ಎಂದು ತಿಳಿಸಿತ್ತು. ಇದೀಗ ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ ಕೋರ್ಟ್ ಸಮಸ್ಸ್ ನೀಡಿದೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪಿಎಫ್‌ಐ ಸಂಘಟನೆಯೊಂದಿಗೆ ಬಜರಂಗದಳವನ್ನು ಹೋಲಿಕೆ ಮಾಡಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುತ್ತೇವೆ ಎಂದು ಹೇಳುತ್ತಿದ್ದಂತೆ ಸಾಕಷ್ಟು ಆಕ್ಷೇಪಗಳು ಕೇಳಿ ಬಂದಿತ್ತು.
ದೇಶ ದ್ರೋಹಿ ಸಂಘಟನೆ, ಬ್ಯಾನ್ ಆಗಿರುವ ಸಂಘಟನೆಗೆ ಬಜರಂಗದಳವನ್ನು ಹೋಲಿಕೆ ಮಾಡಿರುವುದು ಸರಿಯಲ್ಲ. ಈ ಹಿನ್ನೆಲೆ ಹಿಂದು ಸುರಕ್ಷಾ ಪರಿಷದ್ನ ಅಧ್ಯಕ್ಷ ಹಿತೇಶ್ ಭಾರಧ್ವಾಜ ಎಂಬುವರು ಮಾನನಷ್ಟ ಮೊಕದ್ದಮೆ ದಾಖಲು ಮಾಡಿದ್ದರು. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪಂಜಾಬ್ನ ಸಂಗ್ರೂರ್ ಜಿಲ್ಲಾ ನ್ಯಾಯಲಯದಿಂದ ಸಮನ್ಸ್ ಜಾರಿಯಾಗಿದ್ದು, ಜುಲೈ 10ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ.