ಮೊಹಾಲಿ ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ, ಎಂಟು ಕಾರ್ಮಿಕರಿಗೆ ಗಾಯ

fire
Published on

ಮೊಹಾಲಿ: ಪಂಜಾಬ್‌ನ ಮೊಹಾಲಿಯ ಚನಾಲೋನ್‌ನಲ್ಲಿರುವ ಇಂಡಸ್ಟ್ರಿಯಲ್ ಫೋಕಲ್ ಪಾಯಿಂಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಎಷ್ಟು ಭೀಕರವಾಗಿತ್ತು ಎಂದರೆ ಇಡೀ ಕಾರ್ಖಾನೆಯಿಂದ ಕಪ್ಪು ಹೊಗೆ ಆಕಾಶಕ್ಕೆ ಹರಡಿತು.

ಎಂಟು ಕಾರ್ಮಿಕರಿಗೆ ಗಾಯ 
ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಈ ಸಮಯದಲ್ಲಿ ಎಂಟು ಕಾರ್ಮಿಕರು ಗಾಯಗೊಂಡಿದ್ದಾರೆ. ಬೆಂಕಿ ಅವಘಡದ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಆಗಮಿಸಿದವು. 24 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ
ಕಾರ್ಖಾನೆಯಲ್ಲಿ ಇಷ್ಟು ದೊಡ್ಡ ಬೆಂಕಿ ಹೇಗೆ ಸಂಭವಿಸಿತು ಎಂಬುದಕ್ಕೆ ಕಾರಣಗಳು ಇನ್ನೂ ಬಹಿರಂಗಗೊಂಡಿಲ್ಲ. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಕಾರ್ಖಾನೆಯಿಂದ ಕಪ್ಪು ಹೊಗೆ ಹೊರಹೊಮ್ಮುವುದನ್ನು ಕಾಣಬಹುದು. ವರದಿಯ ಪ್ರಕಾರ, 8 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ, ಈ ಪೈಕಿ ಇಬ್ಬರನ್ನು ಮೊಹಾಲಿ ಸಿಎಲ್‌ ಆಸ್ಪತ್ರೆಗೆ ಮತ್ತು ಮೂವರನ್ನು ಹತ್ತಿರದ ಸಿವಿಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿದ್ದ ಜನರ ಪ್ರಕಾರ, ಇಂದು ಬೆಳಗ್ಗೆ 11:00 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅದನ್ನು ನಿಯಂತ್ರಿಸುವ ಪ್ರಯತ್ನ ಇನ್ನೂ ಮುಂದುವರೆದಿದೆ. ಅಕ್ಕಪಕ್ಕದಲ್ಲಿ ಹಲವು ಕಾರ್ಖಾನೆಗಳಿದ್ದು, ಬೆಂಕಿ ಹರಡುವ ಭೀತಿ ಎದುರಾಗಿದೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net