ಭೀಕರ ಪ್ರವಾಹಕ್ಕೆ ಪಂಜಾಬ್​​ ತತ್ತರ; ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಹಾನಿ: 37 ಜನರು ಮೃತ!

photo - 2025-09-03T225109.306
Published on

1988ರ ನಂತರದ ಅತ್ಯಂತ ಭೀಕರ ಪ್ರವಾಹವನ್ನು ಎದುರಿಸುತ್ತಿರುವ ಪಂಜಾಬ್‌ನಲ್ಲಿ ಇದೀಗ ಮತ್ತೆ ಸುರಿದ ಭಾರೀ ಮಳೆಯು ಪ್ರವಾಹ ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಈ ಭಾರಿ ಮಳೆಯಿಂದ ರಾಜ್ಯದ ಎಲ್ಲಾ 23 ಜಿಲ್ಲೆಗಳು ಹಾನಿಗೊಳಗಾಗಿದ್ದು, ಇಲ್ಲಿಯವರೆಗೆ 37 ಜನರು ಮೃತಪಟ್ಟಿದ್ದಾರೆ ಎಂದು ಬುಧವಾರ ವರದಿಯಾಗಿದೆ.

ಗುರುದಾಸ್ಪುರ, ಪಠಾಣ್ಕೋಟ್, ಫಜಿಲ್ಕಾ, ಕಪುರ್ತಲಾ, ತರಣ್ ತರಣ್, ಫಿರೋಜ್ಪುರ, ಹೋಶಿಯಾರ್ಪುರ್ ಮತ್ತು ಅಮೃತಸರ ಜಿಲ್ಲೆಗಳ ಗ್ರಾಮಗಳು ಪ್ರವಾಹದಿಂದ ಹೆಚ್ಚು ಹಾನಿಗೊಳಗಾಗಿವೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆ ಪಂಜಾಬ್ ಭಾರಿ ಪ್ರವಾಹಕ್ಕೆ ಸಾಕ್ಷಿಯಾಗಿದೆ. ಪ್ರವಾಹದಲ್ಲಿ 1.48 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಭೂಮಿಯ ಬೆಳೆಗಳು ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶ ನಮ್ಮ ಬೆಂಬಲಕ್ಕೆ ನಿಲ್ಲುತ್ತೆ

"ದೇಶವು ಬಿಕ್ಕಟ್ಟನ್ನು ಎದುರಿಸಿದಾಗಲೆಲ್ಲಾ, ಪಂಜಾಬ್ ಯಾವಾಗಲೂ ಅದರ ಬೆಂಬಲಕ್ಕೆ ನಿಂತಿದೆ. ನಾವು ಗರಿಷ್ಠ ತ್ಯಾಗಗಳನ್ನು ಮಾಡಿದ್ದೇವೆ. ಇಂದು, ಪಂಜಾಬ್ ಬಿಕ್ಕಟ್ಟಿನಲ್ಲಿದ್ದು, ದೇಶವು ನಮ್ಮ ಬೆಂಬಲಕ್ಕೆ ನಿಲ್ಲುತ್ತದೆ ಎಂದು ನಾನು ಭಾವಿಸುತ್ತೇನೆ" ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ಹೇಳಿದ್ದಾರೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net