ಅಪಘಾತದ ಭೀಕರತೆಗೆ ಜೀಪ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆ ನಡೆದ ತಕ್ಷಣವೇ ಸ್ಥಳೀಯರು ಹಾಗೂ ತುರ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಗೊಂಡಿರುವ 15ಕ್ಕೂ ಹೆಚ್ಚು ಜನರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯ ಕಾರಣವೇ ಅಥವಾ ತಾಂತ್ರಿಕ ದೋಷವೇ ಎಂಬ ಕುರಿತು ತನಿಖೆ ಆರಂಭಿಸಿದ್ದಾರೆ,(ಏಜೆನ್ಸೀಸ್).