ರಾಜ್ಯದಲ್ಲಿರುವ ಪಾಕಿಸ್ತಾನ ಪ್ರಜೆಗಳನ್ನು ಹೊರಗೆ ದಬ್ಬಿರಿ: ಬಿಜೆಪಿ ಪ್ರಕೋಷ್ಠ | Statewide signature campaign

Signature campaign
Published on

ಬೆಂಗಳೂರು: ಪಾಕಿಸ್ತಾನ ಪ್ರಜೆಗಳನ್ನು ತ್ವರಿತವಾಗಿ ಹೊರಗಟ್ಟಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ, ಬಿಜೆಪಿ ಪ್ರಕೋಷ್ಠಗಳು ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿವೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದರ ವಿರುದ್ಧ ಕೇಂದ್ರ ಸರ್ಕಾರ ತಕ್ಷಣ ಬಿಗಿಯಾದ ರಾಜತಾಂತ್ರಿಕ ನಿರ್ಧಾರಗಳನ್ನು ಕೈಗೊಂಡು, ಖಡಕ್ ಸಂದೇಶ ನೀಡಿದೆ.

ಕಠಿಣ ರಾಜತಾಂತ್ರಿಕ ನಿರ್ಣಯಗಳ ಪೈಕಿ ದೇಶದಲ್ಲಿ ನೆಲೆಸಿರುವ ಪಾಕಿಸ್ತಾನದ ನಿವಾಸಿಗಳನ್ನು 48 ತಾಸುಗಳಲ್ಲಿ ಹುಡುಕಿ ಅವರ ದೇಶಕ್ಕೆ ಕಳುಹಿಸುವುದಾಗಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಹಲವು ರಾಜ್ಯಗಳು ಪಾಕ್ ಪ್ರಜೆಗಳನ್ನು ಪತ್ತೆ ಹಚ್ಚಿ ಅವರ ದೇಶಕ್ಕೆ ಕಳುಹಿಸಲು ಕ್ರಮವಹಿಸಿವೆ. ಅದೇ ರೀತಿ ರಾಜ್ಯ ಸರ್ಕಾರ ಕ್ರಮವಹಿಸಿ, ದೇಶದ ಭದ್ರತೆಗೆ ಸಹಕರಿಸಬೇಕು ಎಂದು ಪ್ರಕೋಷ್ಠಗಳ ರಾಜ್ಯ ಸಂಯೋಜಕ ಎಸ್.ದತ್ತಾತ್ರಿ ಕೋರಿದ್ದಾರೆ.

ರಾಜ್ಯಾದ್ಯಂತ ಸಹಿ ಸಂಗ್ರಹ ಅಭಿಯಾನ ಪೂರ್ವಭಾವಿ ಸಭೆ ನಡೆಸಿ ಸಿದ್ಧತೆ ಮಾಡಿಕೊಂಡಿದ್ದು, ಅಂದಾಜು ನಾಲ್ಕ ಸಾವಿರ ಕಾರ್ಯಕರ್ತರು ಈ ಅಭಿಯಾನದಲ್ಲಿ ತೊಡಗಿಕೊಂಡಿದ್ದಾರೆ. ಎರಡು ಸಂದೇಶ ತಲುಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

ಪಹಲ್ಗಾಮ್ ದುಷ್ಕೃತ್ಯದ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡ ಕಠಿಣ ನಿರ್ಧಾರಗಳನ್ನು ರಾಜ್ಯದ ಜನರಿಗೆ ತಿಳಿಸುವುದು, ರಾಜ್ಯದಲ್ಲಿರುವ ಪಾಕಿಸ್ತಾನ ನಿವಾಸಿಗಳನ್ನು ಅವರ ದೇಶಕ್ಕೆ ಕಳುಹಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ಹೇರುವುದು ಅಭಿಯಾನದ ಉದ್ದೇಶವಾಗಿದೆ ಎಂದಿದ್ದಾರೆ.

ರಾಜ್ಯಪಾಲರಿಗೆ ಮನವಿ

ಮೂರು ದಿನಗಳ ಕಾಲ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಿದ್ದು, 7ರಂದು ರಾಜ್ಯಪಾಲರಿಗೆ ಮನವಿಪತ್ರ ಸಲ್ಲಿಸಲಿದೆ. ಪಾಕಿಸ್ತಾನ ಪ್ರಜೆಗಳನ್ನು ಗುರುತಿಸಿ ಅವರ ದೇಶಕ್ಕೆ ಕಳುಹಿಸಲು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಪ್ರಕೋಷ್ಠಗಳ ನಿಯೋಗ ಕೋರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net