ಮಾದಕ ವಸ್ತುಗಳ ಮಾರಾಟಕ್ಕೆ ಕಡಿವಾಣ ಹಾಕಿ

manavi
ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಣೆ ನಿಯಂತ್ರಿಸುವಂತೆ ಒತ್ತಾಯಿಸಿ ಶಾಶ್ವತಿ ಮಹಿಳಾ ವೇದಿಕೆಯ ಡಾ. ಶಾಂತಾ ಸುರೇಂದ್ರ, ಅರ್ಚನಾ ನಿರಂಜನ್, ಚಂದ್ರಮತಿ ಹೆಗ್ಡೆ, ಸ್ಟೆಲ್ಲಾ ಮಾರ್ಟಿನ್, ನಂದಿನಿ ಶೆಟ್ಟಿ ಮುಂತಾದವರು ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
Published on

ಶಿವಮೊಗ್ಗ: ಮಾದಕ ವಸ್ತುಗಳ ಬಳಕೆ ಹೆಚ್ಚುತ್ತಿದೆ. ಮಾರಾಟ, ಸಾಗಣೆ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಶಾಶ್ವತಿ ಮಹಿಳಾ ವೇದಿಕೆ ಪ್ರಮುಖರು ಬುಧವಾರ ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ಮಾದಕ ವಸ್ತುಗಳ ವ್ಯಸನಕ್ಕೆ ವಿದ್ಯಾರ್ಥಿಗಳು, ಜನಸಾಮಾನ್ಯರು ಬಲಿಯಾಗುತ್ತಿದ್ದಾರೆ. ಸುಲಭವಾಗಿ ಜನರ ಕೈಗೆ ಮಾದಕ ವಸ್ತುಗಳು ಸಿಗುತ್ತಿವೆ. ಇದರಿಂದ ಸಮಾಜದ ಸ್ವಾಸ್ಥೃ ಹಾಳಾಗುತ್ತಿದೆ. ವಿದ್ಯಾರ್ಥಿಗಳು ಸುಲಭವಾಗಿ ಸಿಗುವ ಮಾದಕ ದ್ರವ್ಯಗಳಿಗೆ ದಾಸರಾಗುತ್ತಿದ್ದಾರೆ. ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಾಶ್ವತಿ ಮಹಿಳಾ ವೇದಿಕೆ ಅಧ್ಯಕ್ಷೆ ಡಾ. ಶಾಂತಾ ಸುರೇಂದ್ರ, ಪ್ರಮುಖರಾದ ಚಂದ್ರಮತಿ ಹೆಗ್ಡೆ, ವಿಜಯಲಕ್ಷ್ಮೀ ಸಿ.ಪಾಟೀಲ್, ಸ್ಟೆಲ್ಲಾ ಮಾರ್ಟಿನ್, ಅರ್ಚನಾ ನಿರಂಜನ್, ನಂದಿನಿ ಶೆಟ್ಟಿ, ಮೀನಾ, ಶಿಲ್ಪಾ, ಲಲಿತಮ್ಮ, ಸುಗಂಧಿನಿ, ಲೋಲಾ, ಸುಮಾ ಪ್ರಕಾಶ್, ಉಮಾ, ಅನಿತಾ ಸಿರಿಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net