ಪ್ರಧಾನಿ ಮೋದಿಗೆ ಕರೆ ಮಾಡಿದ ಪುಟಿನ್​; ರಷ್ಯಾದ ಸಂಪೂರ್ಣ ಬೆಂಬಲ ಭಾರತಕ್ಕಿದೆ ಎಂದು ಸ್ಪಷ್ಟನೆ |Russia Support

dk - 2025-05-05T162117.890
Published on

Russia Support : ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​, ಭಾರತ ಪ್ರಧಾನಿ ನರೇಂದ್ರ ಮೋದಿಗೆ ದೂರವಾಣಿ ಕೆರೆ ಮಾಡಿ, ಪಹಲ್ಗಾಮ್​ ಭಯೋತ್ಪಾದಕ ದಾಳಿ ಖಂಡಿಸಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಹೋರಾಟವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ ಎಂದು ವರದಿಯಾಗಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ ಬಗ್ಗೆ ಪುಟಿನ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ 'ಎಕ್ಸ್' ವೇದಿಕೆಯಲ್ಲಿ ಹಂಚಿಕೊಂಡಿದ್ದಾರೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತಕ್ಕೆ ರಷ್ಯಾ ತನ್ನ ಬೆಂಬಲವನ್ನು ಭರವಸೆ ನೀಡಿದೆ ಎಂದು ಅವರು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಘೋರ ದಾಳಿಯ ಅಪರಾಧಿಗಳು ಮತ್ತು ಅವರ ಬೆಂಬಲಿಗರನ್ನು ನ್ಯಾಯಕ್ಕೆ ಒಳಪಡಿಸಬೇಕು ಎಂದು ಪುಟಿನ್ ಒತ್ತಿ ಹೇಳಿದ್ದಾರೆಂದು ವರದಿ ಉಲ್ಲೇಖಿಸಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net